ಸಚಿವ ಬೈರತಿ ಸುರೇಶ್ ತಾಯಿಯ ವೈಕುಂಠ ಸಮಾರಾಧನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 03, 2025 | 12:40 PM

ಭೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ (85) ಮೇ 24 ರಂದು ದೈವಾಧೀನರಾದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಂತಿಮ ದರ್ಶನ ಪಡೆದಿದ್ದರು. ಇವತ್ತಿನ ವೈಕುಂಠ ಸಮಾರಾಧನೆ ಕಾರ್ಯಕ್ರಮಕ್ಕೆ ಸಚಿವರಾದ ಜಮೀರ್ ಅಹ್ಮದ್, ರಹೀಂ ಖಾನ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮೊದಲಾದವರು ಸಿಎಂ ಜೊತೆ ಆಗಮಿಸಿದರು.

ಬೆಂಗಳೂರು, ಜೂನ್ 3: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ (Byrathi Suresh ) ಅವರ ತಾಯಿ ಸುಶೀಲಮ್ಮನವರವ ವೈಕುಂಠ ಸಮಾರಾಧನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದರು. ಭೈರತಿಯಲ್ಲಿರುವ ಸಚಿವರ ಸ್ವಗೃಕ್ಕೆ ಸಿದ್ದರಾಮಯ್ಯ ಆಗಮಿಸುವುದನ್ನು ದೃಶ್ಯಗಳಲ್ಲಿ ನೋಡಬಹುದು. ಸಚಿವರ ಮಗ ಮತ್ತು ಅವರ ಬೀಗರಾಗಿರುವ ಬಿಜೆಪಿ ಶಾಸಕ ಎಸ್ ಅರ್ ವಿಶ್ವನಾಥ್ ಸೇರಿದಂತೆ ಕುಟುಂಬದ ಹಲವಾರು ಸದಸ್ಯರು ಮತ್ತು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು; ಮುಖ್ಯಮಂತ್ರಿ ಮತ್ತು ಅವರೊಂದಿಗೆ ಬಂದ ಮಿನಿಸ್ಟ್ರು, ಶಾಸಕ ಮತ್ತು ಇತರ ಗಣ್ಯರನ್ನು ಸ್ವಾಗತಿಸಿದರು.

ಇದನ್ನೂ ಓದಿ:   ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಆರೂ ದಿನವೂ ಮೊಟ್ಟೆ ವಿತರಣೆ: ಸಿದ್ದರಾಮಯ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.