Bengaluru: ಅಗಲಿದ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಉಮ್ಮನ್ ಚಾಂಡಿಯವರ ಅಂತಿಮ ದರ್ಶನ ಪಡೆದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಬೆಳಗಿನ ಜಾವ ನಗರದ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದ ಕೇರಳದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿಯವರ (Oommen Chandy) ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. 80-ವರ್ಷದವರಾಗಿದ್ದ ಉಮ್ಮನ್ ಚಾಂಡಿ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಮತ್ತು ಕಳೆದ ಕೆಲ ದಿನಗಳಿಂದು ನಗರದ ಆಸ್ಪತ್ರಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮುಖ್ಯಮಂತ್ರಿಗಳ ಜೊತೆ ಇಂಧನ ಸಚಿವ ಕೆಜೆ ಜಾರ್ಜ್, ಗೃಹ ಸಚಿವ ಜಿ ಪರಮೇಶ್ವರ್ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಸಹ ಅಗಲಿದ ನಾಯಕನ ಅಂತಿಮ ದರ್ಶನ ಪಡೆದರು. ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸೋನಿಯ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಉಮ್ಮನ್ ಚಾಂಡಿಯವರ ಅಂತಿಮ ದರ್ಶನ ಪಡೆದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos