ದಿಢೀರನೆ ಎಮ್ಮೆಲ್ಸಿ ಬಿಕೆ ಹರಿಪ್ರಸಾದ್ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: May 29, 2025 | 11:46 AM

ವಿಧಾನ ಪರಿಷತ್​ನಲ್ಲಿ ಆಡಳಿತ ಪಕ್ಷದ ನಾಯಕರಾಗಿರುವ ಹರಿಪ್ರಸಾದ್ ಹಿಂದೆ ಕರ್ನಾಟಕದಿಂದ ರಾಜ್ಯ ಸಭಾ ಸದಸ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. ಸೋನಿಯ ಗಾಂಧಿಯವರ ಆಪ್ತವಲಯದಲ್ಲಿ ಅವರು ಗುರುತಿಸಿಕೊಳ್ಳುತ್ತಾರೆ. ಸಿದ್ದರಾಮಯ್ಯ ಕೇವಲ ಎರಡೂವರೆ ಅವಧಿಗೆ ಸಿಎಂ ಅನ್ನೋದೇ ನಿಜವಾಗಿದ್ದರೆ, ಪ್ರಸಾದ್ ಅವರನ್ನು ಭೇಟಿಯಾಗುವುದು ಅನಿವಾರ್ಯವಾಗುತ್ತದೆ.

ಬೆಂಗಳೂರು, ಮೇ 29: ಇವತ್ತು ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hari Prasad) ಅವರ ಹುಟ್ಟುಹಬ್ಬವೇನೂ ಅಲ್ಲ. ಅದು ಇವತ್ತಿಗೆ ಸರಿಯಾಗಿ ಎರಡು ತಿಂಗಳು ನಂತರ ಇದೆ, ಅವರು ಹುಟ್ಟಿದ್ದು ಜುಲೈ 29ರಂದು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ದಿಢೀರನೆ ಪ್ರಸಾದ್ ಮನೆಗೆ ಭೇಟಿ ನೀಡಿದರು. ತಮ್ಮ ಮನೆಯ ಮೆಟ್ಟಿಲುಗಳ ಮೇಲೆ ಬೋಕೆ ಹಿಡಿದು ನಿಂತಿದ್ದ ಪ್ರಸಾದ್ ಮುಖ್ಯಮಂತ್ರಿಯವರನ್ನು ಬರಮಾಡಿಕೊಂಡರು. ಸಾಮಾನ್ಯವಾಗಿ ಮುಖ್ಯಮಂತ್ರಿಯಾದವರು ಶಾಸಕರ, ಸಚಿವರ ಮನೆಗೆ ಹೋಗೋದಿಲ್ಲ, ಅವರೆಲ್ಲ ಸಿಎಂರನ್ನು ಕಾಣಲು ಅಪಾಯಿಂಟ್ಮೆಂಟ್ ತೆಗೆದುಕೊಂಡು ಬರುತ್ತಾರೆ. ಹಾಗಾಗಿ, ಸಿದ್ದರಾಮಯ್ಯ ಪ್ರಸಾದ ಮನೆಗೆ ಭೇಟಿ ನೀಡಿದ ಹಿಂದೆ ಗಹನವಾದ ಕಾರಣವಿದೆ.

ಇದನ್ನೂ ಓದಿ:   ಚೀಫ್ ವಿಪ್ ಆಗಿರುವ ರವಿಕುಮಾರ್ ಕಲಬುರಗಿ ಡಿಸಿಯನ್ನು ಪಾಕಿಸ್ತಾನದವರು ಅನ್ನುತ್ತಾರೆ: ಸಿದ್ದರಾಮಯ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.