ಮಂಡಿನೋವಿಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ ಬೊಮ್ಮಾಯಿಯವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

Updated on: Oct 21, 2023 | 1:14 PM

ಕಳೆದ ತಿಂಗಳು ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದಾಗಲೂ ಸಿದ್ದರಾಮಯ್ಯ ಆಸ್ಪತ್ರೆಗೆ ಹೋಗಿ ಮಾತಾಡಿಸಿದ್ದರು. ವಿಧಾನ ಸಭೆ ಅಧಿವೇಶನ ನಡೆಯುತ್ತಿದ್ದಾಗ ಕೂಗಾಡಿ ಅಧಿಕ ರಕ್ತದೊತ್ತಡಕ್ಕೊಳಗಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಹ ಸಿದ್ದರಾಮಯ್ಯ ಹಾಸ್ಪಿಟಲ್ ಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramaiah) ಈ ಸ್ವಭಾವವೇ ಕನ್ನಡಿಗರಿಗೆ ಇಷ್ವವಾಗೋದು. ಅವರು ರಾಜಕೀಯ ಮತ್ತು ಖಾಸಗಿ ಬದುಕನ್ನು ಪ್ರತ್ಯೇಕವಾಗಿಡುತ್ತಾರೆ. ರಾಜಕೀಯವೇ ಬೇರೆ ವೈಯಕ್ತಿಕ ಸಂಬಂಧಗಳೇ ಬೇರೆ-ಸೂತ್ರವನ್ನು ಪಾಲಿಸುತ್ತಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಬಹಳ ದಿನಗಳಿಂದ ಮಂಡಿನೋವಿನ ಬಾಧೆ ಕಾಡುತ್ತಿದೆ. ಅವರೀಗ ನಗರದ ಖ್ಯಾತ ಅಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ಬೊಮ್ಮಾಯಿಯವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಅವರೊಂದಿಗೆ ಗೃಹ ಸಚಿವ ಜಿ ಪರಮೇಶ್ವರ್ (G Parameshwar) ಸಹ ಇದ್ದರು. ಕಳೆದ ತಿಂಗಳು ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದಾಗಲೂ ಸಿದ್ದರಾಮಯ್ಯ ಆಸ್ಪತ್ರೆಗೆ ಹೋಗಿ ಮಾತಾಡಿಸಿದ್ದರು. ವಿಧಾನ ಸಭೆ ಅಧಿವೇಶನ ನಡೆಯುತ್ತಿದ್ದಾಗ ಕೂಗಾಡಿ ಅಧಿಕ ರಕ್ತದೊತ್ತಡಕ್ಕೊಳಗಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಹ ಸಿದ್ದರಾಮಯ್ಯ ಹಾಸ್ಪಿಟಲ್ ಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More