Pahelgam Terror Attack: ಗುಂಡಿಗೆ ಬಲಿಯಾದ ಭರತ್ ಭೂಷಣ್ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ
ಭರತ್ ಭೂಷಣ್ ಅಂತಿಮ ಸಂಸ್ಕಾರದಲ್ಲಿ ಸರ್ಕಾರದ ಪರವಾಗಿ ರಾಮಲಿಂಗಾರೆಡ್ಡಿ ಭಾಗಿಯಾಗಲಿದ್ದಾರೆ. ರಾಜ್ಯ ಸರ್ಕಾರವು ಭಯೋತ್ಪಾದಕರ ದಾಳಿಯಲ್ಲಿ ಮಡಿದ ಕನ್ನಡಿಗರ ಕುಟುಂಬಗಳಿಗೆ ತಲಾ ₹10 ಲಕ್ಷ ನೀಡುವ ಘೋಷಣೆ ಮಾಡಿದೆ. ಭರತ್ ಭೂಷಣ್ ಮತ್ತು ಶಿವಮೊಗ್ಗ ಮಂಜುನಾಥ್ ರಾವ್ ಅವರ ಪಾರ್ಥೀವ ಶರೀರಗಳು ಇಂದು ಬೆಳಗ್ಗೆ 6ಗಂಟೆಗೆ ದೆಹಲಿಯಿಂದ ಬೆಂಗಳೂರುಗೆ ಆಗಮಿಸಿದವು.
ಬೆಂಗಳೂರು, ಏಪ್ರಿಲ್ 24: ಮಂಗಳವಾರ ಮಧ್ಯಾಹ್ನ ಹೇಡಿ ಉಗ್ರರ ಗುಂಡಿಗೆ ಬಲಿಯಾದ ಭರತ್ ಭೂಷಣ್ ಅವರ ಮೃತದೇಹ ಬೆಂಗಳೂರಿಗೆ ಆಗಮಿಸಿದ್ದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೃತರ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿ ಸುಜಾತಾ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಾರಿಗೆ ಸಚಿವ ರಾಮಲಿಗಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಎಂ ಅರ್ ಸೀತಾರಾಮ್, ಆರ್ ಆರ್ ನಗರದ ಶಾಸಕ ಮುನಿರತ್ನ ನಾಯ್ಡು ಮತ್ತು ಕೆಲ ಅಧಿಕಾರಿಗಳು ಸಿಎಂ ಜೊತೆಯಿದ್ದರು. ಸಿದ್ದರಾಮಯ್ಯ ಸಾಂತ್ವನ ಹೇಳುವಾಗ ಭರತ್ ಅವರ ಪತ್ನಿ ಬಿಕ್ಕಿ ಬಿಕ್ಕಿ ಅತ್ತರು. ಭರತ್ ಅವರ ಪುಟ್ಟಮಗು ಸಿದ್ದರಾಮಯ್ಯ ಅವರ ಕೈ ಕುಲುಕಿತು.
ಇದನ್ನೂ ಓದಿ: ಕೇಂದ್ರದ ಜತೆ ನಾವಿದ್ದೇವೆ, ಉಗ್ರರನ್ನು ಸಂಪೂರ್ಣ ಮಟ್ಟ ಹಾಕಿ: ಸಿಎಂ ಸಿದ್ದರಾಮಯ್ಯ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Published on: Apr 24, 2025 10:37 AM
Latest Videos

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್

ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!

ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
