Assembly Session; ಅಗಲಿದ ದ್ವಾರಕೀಶ್ ಮತ್ತು ಅಪರ್ಣಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jul 15, 2024 | 2:08 PM

Assembly Session; ದ್ವಾರಕೀಶ್ ಅವರ ಬಗ್ಗೆ ಮಾತಾಡಿದ ಸಿದ್ದರಾಮಯ್ಯ, ಮೆಕ್ಯಾನಿಕಲ್ ಎಂಜಿನೀಯರ್ ಆಗಿದ್ದರೂ ಸಿನಿಮಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡ ಮೈಸೂರಿನ ದ್ವಾರಕೀಶ್, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದರು, ಸ್ನೇಹಜೀವಿಯಾಗಿದ್ದರು ಮತ್ತು ಒಮ್ಮೆ ಅಸೆಂಬ್ಲಿ ಚುನಾವಣೆಗೆ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಿದ್ದರು ಎಂದು ಹೇಳಿದರು.

ಬೆಂಗಳೂರು: ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಶುರುವಾಗಿದೆ. ಅಸೆಂಬ್ಲಿ ಸ್ಪೀಕರ್ ಯುಟಿ ಖಾದರ್ ಅವರು ಸದನದಲ್ಲಿ ಸದಸ್ಯರಿಗೆ ಸಂವಿಧಾನದ ಪ್ರಸ್ತಾವನೆ ಬೋಧಿಸಿದ ನಂತರ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖ್ಯಾತ ನಿರ್ಮಾಪಕ–ನಿರ್ದೇಶಕ, ನಟ ದ್ವಾರಕೀಶ್ ಮತ್ತು ಕಳೆದ ಗುರುವಾರ ಲಂಗ್ ಕ್ಯಾನ್ಸರ್ ಗೆ ಬಲಿಯಾದ ನಟಿ–ನಿರೂಪಕಿ ಅಪರ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಚಿಕ್ಕಮಗಳೂರಿನಲ್ಲಿ ಜನಿಸಿದ ಅಪರ್ಣ ಅಪಾರ ಮತ್ತು ಬಹುಮುಖ ಪ್ರತಿಭೆಯ ಕಲಾವಿದೆಯಾಗಿದ್ದರು. ಪುಟ್ಣಣ್ಣ ಕಣಗಾಲ್ ನಿರ್ದೇಶನದ ‘ಮಸಣದ ಹೂ’ ಚಿತ್ರದ ಮೂಲಕ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಿದ್ದ ಅವರು ಒಬ್ಬ ನಿರೂಪಕಿಯಾಗಿ ಮಾಡಿದ ಸಾಧನೆ ದೊಡ್ಡದು. ಶುದ್ಧ ಕನ್ನಡವನ್ನು ಅರಳು ಹುರಿದಂತೆ ಮಾತಾಡುತ್ತಿದ್ದ ಅಪರ್ಣ ಅವರಂಥ ನಿರೂಪಕಿ ಮತ್ತೊಬ್ಬರು ಸಿಗಲಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    CM Siddaramaiah TV9 Exclusive Interview Live: ಟಿವಿ9 ವಿಶೇಷ ಸಂದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.