AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ

ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ

ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on:Apr 25, 2025 | 12:00 PM

Share

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸುತ್ತೂರು ಮಠದಲ್ಲಿ ಮಗುವಿನ ನಾಮಕರಣ ಸಮಾರಂಭದಲ್ಲಿ ಭಾಗವಹಿಸಿದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರ ಪುತ್ರಿಯ ಮಗುವಿಗೆ "ಚಂದ್ರಮತಿ" ಎಂದು ನಾಮಕರಣ ಮಾಡಿ ಆಶೀರ್ವದಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ಚಾಮರಾಜನಗರ ಜಿಲ್ಲೆ ಪ್ರವಾಸದಲ್ಲಿದ್ದಾರೆ.

ಚಾಮರಾಜನಗರ, ಏಪ್ರಿಲ್​ 25: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಮರಾಜನಗರ (Chamrajnagar) ಜಿಲ್ಲೆ ಪ್ರವಾಸದಲ್ಲಿದ್ದಾರೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸುತ್ತೂರು ಮಠದಲ್ಲಿ ಸಿಎಂ ಸಿದ್ದರಾಮಯ್ಯ ಮಗುವಿಗೆ ನಾಮಕರಣ ಮಾಡಿದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಪುತ್ರ ಶಿವಶಂಕರಿ ಹಾಗೂ ಉಮಾಶಂಕರ್ ದಂಪತಿಯ ಮಗುವಿಗೆ ಚಂದ್ರಮತಿ ಎಂದು ನಾಮಕರಣ ಮಾಡಿದರು. ಚಂದ್ರಮತಿ ಎಂದು ಸೆಹರನ್ನಿಟ್ಟು ಆಶೀರ್ವದಿಸಿದರು.

Published on: Apr 25, 2025 11:27 AM

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More