Mysore Siddaramaiah Program Live: ಬಿಜೆಪಿ ಮುಖಂಡ ಹೆಚ್ವಿ ರಾಜೀವ್ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೈ ಸೇರ್ಪಡೆ
ಮೈಸೂರಿನ ವಿದ್ಯಾರಣ್ಯಪುರಂ ಭೂತಾಳೆ ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೆ.ಆರ್.ಕ್ಷೇತ್ರದ ಬಿಜೆಪಿ ಮುಖಂಡ, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಕಾಂಗ್ರೆಸ್ ಸೇರ್ಪಡೆಯಾದರು.
ಮೈಸೂರು, ಮಾರ್ಚ್ 27: ವಿದ್ಯಾರಣ್ಯಪುರಂ ಭೂತಾಳೆ ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೆ.ಆರ್.ಕ್ಷೇತ್ರದ ಬಿಜೆಪಿ ಮುಖಂಡ, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್, ಕೆ.ಆರ್.ಕ್ಷೇತ್ರದ ಜೆಡಿಎಸ್ ಮುಖಂಡ, ಪರಾಜಿತ ಅಭ್ಯರ್ಥಿ ಕೆ.ವಿ.ಮಲ್ಲೇಶ್, ಮಾಜಿ ಮೇಯರ್ ಭೈರಪ್ಪ ಸೇರಿ ಹಲವರು ಇಂದು (ಮಾ.27) ಕಾಂಗ್ರೆಸ್ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಚಿವ ವೆಂಕಟೇಶ್, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಸೇರಿ ಹಲವರು ಭಾಗವಹಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಚಾಮುಂಡೇಶ್ವರಿ, ನರಸಿಂಹರಾಜ, ಕೃಷ್ಣರಾಜ, ಚಾಮರಾಜ ಕ್ಷೇತ್ರದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Mar 27, 2024 01:53 PM
Latest Videos