ಪ್ರಿಯಾಂಕ್ ಖರ್ಗೆ ಪತ್ರ ಬೆನ್ನಲ್ಲೇ ಸಿಎಂ ಮಹತ್ವದ ಸೂಚನೆ: RSS ಚಟುವಟಿಕೆಗಳಿಗೆ ಬೀಳುತ್ತಾ ಬ್ರೇಕ್?
ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ (RSS) ಎಲ್ಲಾ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಪತ್ರ ಬರೆದಿದ್ದಾರೆ. ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಈ ಪ್ರತ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳುಹಿಸಿ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದ್ದಾರೆ.
ಬಾಗಲಕೋಟೆ , (ಅಕ್ಟೋಬರ್.13): ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ (RSS) ಎಲ್ಲಾ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಪತ್ರ ಬರೆದಿದ್ದಾರೆ. ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಈ ಪ್ರತ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳುಹಿಸಿ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದ್ದಾರೆ.
ಇನ್ನು ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಬಹಿರಂಗವಾಗಿ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್ ಗೆ ಸೂಚಿಸಿದ್ದೇನೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್ ಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ಹೀಗಾಗಿ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಬೀಳುವುದು ಸಾಧ್ಯತೆಗಳಿವೆ.
