AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ! ಸಿಎಂ ಸಿದ್ದರಾಮಯ್ಯ ಹೀಗೆಂದಿದ್ದೇಕೆ ನೋಡಿ

ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ! ಸಿಎಂ ಸಿದ್ದರಾಮಯ್ಯ ಹೀಗೆಂದಿದ್ದೇಕೆ ನೋಡಿ

ಗಣಪತಿ ಶರ್ಮಾ
|

Updated on: Mar 25, 2026 | 2:07 PM

Share

ಕರ್ನಾಟಕ ಬಜೆಟ್ 2026ರ ಚರ್ಚೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಕಾಲದ ಕುರಿತು ಮಾತನಾಡಿದ್ದಾರೆ. ಬಜೆಟ್ ಮಂಡನೆಗೆ ರಾಹುಕಾಲ ನೋಡಲಾಗಿದೆ ಎಂಬ ಟೀಕೆಗೆ ಉತ್ತರಿಸಿದ ಅವರು, ತಮಗೆ ಇಂತಹ ನಂಬಿಕೆಗಳಿಲ್ಲ ಎಂದರು. ಹಿಂದೆ ರಾಹುಕಾಲದಲ್ಲಿಯೂ ಬಜೆಟ್ ಮಂಡಿಸಿದ್ದನ್ನು ನೆನಪಿಸಿದ ಸಿಎಂ, ಯುಗಾದಿ ದಿನ ಹಾಗೂ ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇನೆ ಎಂದರು.

ಬೆಂಗಳೂರು, ಮಾರ್ಚ್ 25: ಕರ್ನಾಟಕ ಬಜೆಟ್ 2026 ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ರಾಹುಕಾಲ ನೋಡಿಕೊಂಡು ಸಮಯ ನಿಗದಿ ಮಾಡಿದ್ದರು ಎಂಬ ಪ್ರತಿಪಕ್ಷ ನಾಯಕರ ಟೀಕೆ ಬುಧವಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ನಾಂದಿಹಾಡಿತು. ಈ ವಿಚಾರವಾಗಿ, ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು. ಅದಕ್ಕುತ್ತರಿಸಿದ ಸಿದ್ದರಾಮಯ್ಯ, ಅಧಿಕಾರಿಗಳು ಹಾಗೂ ಮನೆಯವರ ಮಾತು ಕೇಳಿ ರಾಹುಕಾಲ ನೋಡಿದ್ದು ನಿಜ. ಆದರೆ, ವೈಯಕ್ತಿಕವಾಗಿ ರಾಹುಕಾಲ, ಗುಳಿಕಕಾಲ ಅಥವಾ ಯಾವುದೇ ರೀತಿಯ ಗ್ರಹಣ ಕಾಲಗಳಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರು.

ಈ ಹಿಂದೆ ಹಲವು ಬಾರಿ ರಾಹುಕಾಲದಲ್ಲೇ ಬಜೆಟ್ ಮಂಡಿಸಿದ್ದ ಉದಾಹರಣೆಗಳನ್ನೂ ಸಿದ್ದರಾಮಯ್ಯ ಅವರು ನೀಡಿದ್ದಾರೆ. ಅಲ್ಲದೆ, ‘ಯುಗಾದಿ ದಿನ ಹಾಗೂ ಶಿವರಾತ್ರಿ ದಿನ ಯಾರಾದರೂ ಮಾಂಸ ಸೇವನೆ ಮಾಡುತ್ತಾರಾ? ನಾನು ತಿನ್ನುತ್ತೇನೆ, ನನ್ನಿಷ್ಟ’ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More