Assembly Session: ದಶಕಗಳ ಹಿಂದೆ ಸಂವಿಧಾನ ಸಭೆಯಲ್ಲಿ ಡಾ ಬಿಅರ್ ಅಂಬೇಡ್ಕರ್ ಮಾಡಿದ ಭಾಷಣವನ್ನು ಸಿದ್ದರಾಮಯ್ಯ ಸದನದಲ್ಲಿ ಉಲ್ಲೇಖಿಸಿದರು

ಅರುಣ್​ ಕುಮಾರ್​ ಬೆಳ್ಳಿ

Updated on: Jul 21, 2023 | 4:31 PM

ಸಾಮಾಜಿಕ ಅಸಮಾನತೆಗೆ ಸಿಕ್ಕು ನರಳುವ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು

ಬೆಂಗಳೂರು:  ವಿಧಾನ ಪರಿಷತ್​ನಲ್ಲಿಂದು ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) 1949, ನವೆಂಬರ್ 25 ರಂದು ಕನ್ಸ್ಟಿಟುಯೆಂಟ್ ಅಸೆಂಬ್ಲಿಯಲ್ಲಿ (ಸಂವಿಧಾನ ಸಭೆ) ಸಂವಿಧಾನ ಶಿಲ್ಪಿ ಡಾ ಬಿಅರ್ ಅಂಬೇಡ್ಕರ್ (Dr BR Ambedkar) ಮಾಡಿದ ಅವರ ಕೊನೆಯ ಭಾಷಣವನ್ನು ಉಲ್ಲೇಖಿಸಿದರು. ಅಭಿವೃದ್ಧಿ ಕಾರ್ಯಗಳಲ್ಲಿ ಎಲ್ಲರೂ ಸಮಭಾಗಿಯಾಗಿ, ಬಂದ ಫಲ ಸಮಾನವಾಗಿ ಹಂಚಿಕೊಳ್ಳುವುದನ್ನು ಬಾಬಾ ಸಾಹೇಬರು ಸಮಾನತೆ (equality) ಅಂತ ವ್ಯಾಖ್ಯಾನಿಸಿದ್ದರು ಎಂದು ಸಿದ್ದರಾಮಯ್ಯ ಹೇಳಿದರು. ನಮ್ಮ ದೇಶದಲ್ಲಿ ರಾಜಕೀಯ ಸಮಾನತೆ ಸಿಕ್ಕಿದೆ. ಅಂದರೆ, ದೇಶದ ರಾಷ್ಟ್ರಪತಿ ಮತ್ತು ತೀರ ಕೆಳಸ್ತರದ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಒಂದೇ ವೋಟು ಮತ್ತು ಅದರ ಮೌಲ್ಯ ಕೂಡ ಒಂದೇ. ರಾಷ್ಟ್ರಪತಿಗಳು ಚಲಾಯಿಸಿದ ವೋಟಿಗೆ ಹೆಚ್ಚಿನ ಮೌಲ್ಯ ಇರೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಆದರೆ ದೇಶದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಸಿಕ್ಕಿಲ್ಲ. ವೋಟಿನ ಸಿದ್ಧಾಂತ ಸಾಮಾಜಿಕ ಮತ್ತು ಆರ್ಥಿಕ ಆಯಾಮಗಳಿಗೆ ಅನ್ವಯಿಸುವುದಿಲ್ಲ. ಸಾಮಾಜಿಕ ಅಸಮಾನತೆಗೆ ಸಿಕ್ಕು ನರಳುವ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು. ಬಸವಣ್ಣನವರು ಹೇಳಿದ ಕಾಯಕ ದಾಸೋಹ ಉಕ್ತಿಯನ್ನೂ ಮುಖ್ಯಮಂತ್ರಿ ಉಲ್ಲೇಖಿಸಿದರು,

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.