AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ದಿನಗಳಲ್ಲಿ  ಕೊಬ್ಬರಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿದ್ರಾಮಯ್ಯ!

ಬಾಲ್ಯದ ದಿನಗಳಲ್ಲಿ ಕೊಬ್ಬರಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿದ್ರಾಮಯ್ಯ!

ರಾಮ್​, ಮೈಸೂರು
| Edited By: |

Updated on: Mar 07, 2026 | 8:28 PM

Share

ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಆದಿಶಕ್ತ್ಯಾತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ಇದೇ ವೇಳೆ ತಂಬಿಟ್ಟು, ಕೊಬ್ಬರಿ ಮಿಠಾಯಿ ಬಗ್ಗೆ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಮೈಸೂರು, (ಮಾರ್ಚ್ 07): ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಆದಿಶಕ್ತ್ಯಾತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಭಾಗವಹಿಸಿದ್ದು, ಇದೇ ವೇಳೆ ತಂಬಿಟ್ಟು, ಕೊಬ್ಬರಿ ಮಿಠಾಯಿ ಬಗ್ಗೆ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಚಾಮುಂಡೇಶ್ವರಿ, ವರುಣ ಕ್ಷೇತ್ರದ ಜನರಿಗೆ ಕೃತಜ್ಞತೆಯಿಂದ ಇರುವೆ. ವಿಶೇಷವಾಗಿ ಪಿಲ್ಲಹಳ್ಳಿ ಜನ ಯಾವತ್ತೂ ಕೈಬಿಟ್ಟಿಲ್ಲ. ದೇವರು ದೇವಸ್ಥಾನದ ಒಳಗೆ ಇರುತ್ತಾನೆ ಅನ್ನೋದು ನಂಬಿಕೆ ಅಷ್ಟೇ. ಪೂಜೆ ಮಾಡುವುದರಿಂದ ಒಳ್ಳೆಯದು ಆಗುತ್ತೆ ಅನ್ನೋ ನಂಬಿಕೆ ಇದೆ. ನಾನು ಅದಕ್ಕೆ ವಿರೋಧವಾಗಿಲ್ಲ. ನಮ್ಮೂರಲ್ಲೂ ದಂಡಿನ ಮಾರಮ್ಮನ ದೇವಸ್ಥಾನ ಇದೆ. ನಾನು ಚಿಕ್ಕವನಿದ್ದಾಗ ತಂಬಿಟ್ಟು ಆರತಿ ತೆಗೆದುಕೊಂಡು ಹೋಗುತ್ತಿದ್ದೆ. ಆಗ ತಂಬಿಟ್ಟು, ಕೊಬ್ಬರಿ ಮಿಠಾಯಿ ತಿನ್ನುವುದೇ ಮಜಾ ಎಂದು ಅಂದಿನ ನೆನಪುಗಳನ್ನು ನೆನಪಿಸಿಕೊಂಡರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More