ಎಐಸಿಸಿ ನೂತನ ಉದ್ಘಾಟನೆ ಸಮಾರಂಭಕ್ಕೆ ತೆರಳುವ ಮೊದಲು ದೆಹಲಿಯಲ್ಲಿ ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸಚಿವ ಸಂಪುಟದ ಸಹೋದ್ಯೋಗಿಗಳಾಗಿರುವ ಕೆಜೆ ಜಾರ್ಜ್, ಭೈರತಿ ಸುರೇಶ್ ಮತ್ತು ಡಾ ಎಂಸಿ ಸುಧಾಕರ್ ದೆಹಲಿಗೆ ತೆರಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ವಿರುದ್ಧ ಅಪಸ್ವರಗಳು ದಿನನಿತ್ಯ ಏಳುತ್ತಿವೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ಸುದ್ದಿಗೋಷ್ಠಿಯೊಂದನ್ನು ನಡೆಸಿ ಸರ್ಕಾರದ ವೈಫಲ್ಯಗಳ ಬಗ್ಗೆ ಮಾತಾಡುವೆ ಎಂದಿದ್ದಾರೆ.
ನವದೆಹಲಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ತಲುಪಿದ್ದಾರೆ, ಈಗಾಗಲೇ ವರದಿಯಾಗಿರುವಂತೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಹೊಸ ಕಚೇರಿಗೆ ತೆರಳುವ ಮೊದಲು ಪೊಲೀಸ್ ತುಕಡಿಯಿಂದ ಅವರು ಗೌರವ ರಕ್ಷೆ ಸ್ವೀಕರಿಸಿದರು. ನೂತನ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದ್ದು ಕಟ್ಟಡದ ನಿರ್ಮಾಣ ಕಾರ್ಯ ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಶುರುವಾಗಿತ್ತು, ಅವರೇ ಕಟ್ಟಡದ ಉದ್ಧಾಟನೆಯನ್ನು ನೆರವೇರಿಸಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯಗೆ ಮಹತ್ವದ ದಿನ, ಸ್ನೇಹಮಯಿ ಕೃಷ್ಣ ಸಲ್ಲಿದ್ದ ಅರ್ಜಿ ಇಂದು ವಿಚಾರಣೆ