ಬೆಳಗಾವಿಯಲ್ಲಿ ಸಿದ್ದರಾಮಯ್ಯ ಪೊಲೀಸ್ ಗೌರವ ಸ್ವೀಕರಿಸುವುದನ್ನು ಡಿಕೆ ಶಿವಕುಮಾರ್ ತದೇಕಚಿತ್ತದಿಂದ ವೀಕ್ಷಿಸಿದರು
ವಿಮಾನವೊಂದರಲ್ಲಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಸ್ಥಳೀಯ ನಾಯಕರು ಬರಮಾಡಿಕೊಂಡರು. ನಿಲ್ದಾಣ ಹೊರಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪೊಲೀಸ್ ಗೌರವ ಸಲ್ಲಿಸಲಾಯಿತು
ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೆಲೆಯನ್ನು ಭದ್ರಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ಬೆಳಗಾವಿಯಲ್ಲಿ ವಿವಿಧ ಕಾಮಗಾರಿಗಳನ್ನು (development works) ಉದ್ಘಾಟಿಸಿದರು. ಅದಕ್ಕೂ ಮೊದಲು ವಿಮಾನವೊಂದರಲ್ಲಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಸ್ಥಳೀಯ ನಾಯಕರು ಬರಮಾಡಿಕೊಂಡರು. ನಿಲ್ದಾಣ ಹೊರಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪೊಲೀಸ್ ಗೌರವ ಸಲ್ಲಿಸಲಾಯಿತು. ಮುಖ್ಮಮಂತ್ರಿ ಪೊಲೀಸ್ ವಂದನೆ ಸ್ವೀಕರಿಸುವುದನ್ನು ಶಿವಕುಮಾರ್ ಕೊಂಚ ದೂರದಲ್ಲಿ ನಿಂತು ವೀಕ್ಷಿಸಿದರು. ಬೆಳಗಾವಿಯಿಂದ ಮುಖ್ಯಮಂತ್ರು ಮತ್ತು ಉಪ ಮುಖ್ಯಮಂತ್ರಿ ಹೆಲಿಕಾಪ್ಟರ್ ಒಂದರಲ್ಲಿ ಅಥಣಿಗೆ ತೆರಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ