ಗ್ಯಾರಂಟಿ ಯೋಜನೆಗಳನ್ನು ಯಾವ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಹೇಳಿದ ಸಿಎಂ ಸಿದ್ದರಾಮಯ್ಯ
ಈಗ ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವೆ ಅಂತ ಮತ್ತೇ ಅದೇ ಬಿಜೆಪಿ ನಾಯಕರು ಹೇಳುತ್ತಿದ್ದಾರೆ ಎಂದ ಸಿದ್ದರಾಮಯ್ಯ, ನಮ್ಮ ಮೇಲೆ ನಿಮಗೆ ವಿಶ್ವಾಸವಿರಲಿ, ಯಾವ ಕಾರಣಕ್ಕೂ ಸರ್ಕಾರದ ಅವಧಿ ಮುಗಿಯುವವರೆಗೆ ಅವುಗಳನ್ನು ನಿಲ್ಲಿಸಲ್ಲ ಮತ್ತು ಮುಂದಿನ ಅವಧಿಗೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿರುವುದರಿಂದ ಅ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದರು
ಕಲಬುರಗಿ: ನಗರದ ಕಣ್ಣಿ ಮಾರ್ಕೆಟ್ ಹತ್ತಿರದ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ (Congress convention) ಅಬ್ಬರದ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ (Radhakrishna Doddamani) ಪರ ಮತ ಯಾಚನೆ ಮಾಡಿದರು. ಪಕ್ಷದ ರಾಷ್ಟ್ರೀಯ ನಾಯಕರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 25 ಗ್ಯಾರಂಟಿಗಳನ್ನು ನೀಡಿದ್ದಾರೆ ಮತ್ತು ಅಧಿಕಾರಕ್ಕೆ ಬಂದರೆ ಅವೆಲ್ಲವನ್ನು ಜಾರಿಗೆ ತರುತ್ತಾರೆ, ಕಾಂಗ್ರೆಸ್ ಯಾವತ್ತಿಗೂ ನುಡಿದಂತೆ ನಡೆಯುವ ಪಕ್ಷ ಎಂದು ಸಿದ್ದರಾಮಯ್ಯ ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ನಾವು ನೀಡಿದ 5 ಗ್ಯಾರಂಟಿಗಳನ್ನು ಜಾರಿಗೆ ತರಲ್ಲ ಅಂತಅ ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದರು, ಅದರೆ ಅವುಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿತು. ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗಿದೆ, ಹಾಗಾಗಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿವೆ ಅಂತಲೂ ಅಪಪ್ರಚಾರ ಮಾಡಿದರು. ಈಗ ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವೆ ಅಂತ ಮತ್ತೇ ಅದೇ ಬಿಜೆಪಿ ನಾಯಕರು ಹೇಳುತ್ತಿದ್ದಾರೆ ಎಂದ ಸಿದ್ದರಾಮಯ್ಯ, ನಮ್ಮ ಮೇಲೆ ನಿಮಗೆ ವಿಶ್ವಾಸವಿರಲಿ, ಯಾವ ಕಾರಣಕ್ಕೂ ಸರ್ಕಾರದ ಅವಧಿ ಮುಗಿಯುವವರೆಗೆ ಅವುಗಳನ್ನು ನಿಲ್ಲಿಸಲ್ಲ ಮತ್ತು ಮುಂದಿನ ಅವಧಿಗೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿರುವುದರಿಂದ ಅ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದರು
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬೆಳಗಾವಿ ಮೇಲೆ ಪಿಎಂ-ಸಿಎಂ ಕಣ್ಣು, ಅಖಾಡಕ್ಕೆ ಏಕಕಾಲಕ್ಕೆ ಮೋದಿ, ಸಿದ್ದರಾಮಯ್ಯ ಎಂಟ್ರಿ