ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ ಮತ್ತು ಕಲ್ಯಾಣ ಕೃತಿ ಬಿಡುಗಡೆ: ಸಿದ್ದರಾಮಯ್ಯ ಹೇಳಿದ್ದಿಷ್ಟು

| Updated By: ಗಂಗಾಧರ​ ಬ. ಸಾಬೋಜಿ

Updated on: Sep 28, 2024 | 4:42 PM

ಮೈಸೂರಿನಲ್ಲಿ ನಡೆದ ಗ್ಯಾರಂಟಿ ಯೋಜನೆಗಳು ಬಡವರ ಸುರಕ್ಷತೆ ಮತ್ತು ಕಲ್ಯಾಣ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾಷಣ ನನಗೆ ಸ್ಫೂರ್ತಿ. ಗ್ಯಾರಂಟಿ ಯೋಜನೆ ಜಾರಿ ಮಾಡಿದಾಗ ಹಲವರು ಟೀಕೆ, ತಮಾಷೆ, ಅವಹೇಳನ ಮಾಡಿದರು. ಕೆಲವೊಮ್ಮೆ ಎಲ್ಲವನ್ನೂ ಸಹಿಸಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

ಮೈಸೂರು, ಸೆಪ್ಟೆಂಬರ್​ 28: ನಗರದ ಮಾನಸ ಗಂಗೋತ್ರಿ ವಿಜ್ಞಾನ ಭವನದಲ್ಲಿ ಗ್ಯಾರಂಟಿ ಯೋಜನೆಗಳು ಬಡವರ ಸುರಕ್ಷತೆ ಮತ್ತು ಕಲ್ಯಾಣ ಕೃತಿ ಬಿಡುಗಡೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಗ್ಯಾರಂಟಿ ಯೋಜನೆ ಜಾರಿ ಮಾಡಿದಾಗ ಹಲವರು ಟೀಕೆ, ತಮಾಷೆ, ಅವಹೇಳನ ಮಾಡಿದರು. ಕೆಲವೊಮ್ಮೆ ಎಲ್ಲವನ್ನೂ ಸಹಿಸಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಬಡವರು, ಶ್ರೀಮಂತರೆಂಬ ತಾರತಮ್ಯ ಮಾಡದೆ ಯೋಜನೆ ಜಾರಿ ಮಾಡಿದ್ದೇವೆ. ಅನ್ನಕ್ಕಾಗಿ ಯಾರ ಮನೆ ಮುಂದೆ ನಿಲ್ಲಬಾರದೆಂದು ಅನ್ನಭಾಗ್ಯ ಜಾರಿ ಮಾಡಲಾಗಿದೆ. ಅನ್ನಭಾಗ್ಯದಿಂದ ಜನ ಸೋಮಾರಿಯಾಗುತ್ತಾರೆಂದು ಚರ್ಚೆ ಆಯ್ತು. ಅನ್ನಭಾಗ್ಯ ಜಾರಿ ಮಾಡಿದ್ದು ವೋಟು, ಪ್ರಚಾರಕ್ಕಾಗಿ ಅಲ್ಲ. ಕೊಟ್ಟ ಮಾತಿನಂತೆ ಒಂದು ವರ್ಷದಲ್ಲಿ 5 ಗ್ಯಾರಂಟಿಗಳ ಜಾರಿ ಮಾಡಿದ್ದೇವೆ ಎಂದಿದ್ದಾರೆ. ಕೆಲವು ಯೋಜನೆಗಳಿಗೆ ಜಾತಿ, ಧರ್ಮ, ಆರ್ಥಿಕ ಇತಿ‌ ಮಿತಿಗಳಿಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.