ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

Edited By:

Updated on: May 29, 2026 | 8:15 AM

ಕರ್ನಾಟಕದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ನಿನ್ನೆ (ಮೇ 28) ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.

ಬೆಂಗಳೂರು, ಮೇ 29: ಕರ್ನಾಟಕದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ನಿನ್ನೆ (ಮೇ 28) ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ನಿನ್ನೆ ಬೆಳಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ತಮ್ಮ ನಿರ್ಧಾರ ಪ್ರಕಟಿಸಿದ್ದರು. ತದನಂತರ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯಪಾಲ ಗೆಹ್ಲೋಟ್ ಅವರು ತಮ್ಮ ವಿಶೇಷ ವಿವೇಚನಾಧಿಕಾರವನ್ನು ಬಳಸಿ ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: May 29, 2026 08:08 AM
Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More