Loading video

ನಾಗೇಂದ್ರಗೆ ಜಾಮೀನು ಸಿಗಬಾರದಿತ್ತಾ ಎಂದು ಪತ್ರಕರ್ತನನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

|

Updated on: Oct 15, 2024 | 3:19 PM

ಸಿದ್ದರಾಮಯ್ಯ ಸರ್ಕಾರದ ಎಲ್ಲ ಪ್ರತಿನಿಧಿಗಳು ಕಳೆದ ವರ್ಷ ದೆಹಲಿಗೆ ತೆರಳಿ ನಮ್ಮ ತೆರಿಗೆ ನಮ್ಮ ಹಕ್ಕು ಅಂತ ಪ್ರತಿಭಟನೆ ನಡೆಸಿದ್ದರು. ಈ ವರ್ಷವೂ ಪ್ರತಿಭಟನೆ ನಡೆಯಲಿದೆಯೇ ಎಂದು ಕೇಳಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಇನ್ನೂ ಅದರ ಬಗ್ಗೆ ಯೋಚನೆ ಮಾಡಿಲ್ಲ, ಚರ್ಚಿಸಿ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.

ಬೆಂಗಳೂರು: ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ ಜೈಲಿನಲ್ಲಿದ್ದ ಮಾಜಿ ಸಚಿವ ಮತ್ತು ಬಿ ನಾಗೇಂದ್ರಗೆ ಜಾಮೀನು ಸಿಕ್ಕಿದೆ. ವಿಷಯಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಗೇಂದ್ರಗೆ ನಿನ್ನೆಯೇ ಜಾಮೀನು ಸಿಕ್ಕಿದೆ, ಸಿಗಬಾರದೆನ್ನೋದು ನಿಮ್ಮ ಆಶಯವಾಗಿತ್ತೇ ಎಂದು ಪ್ರಶ್ನೆ ಕೇಳಿದ ಪತ್ರಕರ್ತನನ್ನು ಮರು ಪ್ರಶ್ನಿಸಿದರು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ:  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆಗಿದ್ದರೂ ಎಸ್ಸಿ ಎಸ್ಟಿ ಅನುದಾನ ಕಡಿತ ಮಾಡಲ್ಲ: ಸಿಎಂ ಸಿದ್ದರಾಮಯ್ಯ