Video:ಕೆರಗೋಡು ಹನುಮ ಧ್ವಜ ಗಲಾಟೆ; ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

Edited By: ಕಿರಣ್ ಹನುಮಂತ್​ ಮಾದಾರ್

Updated on: Jan 28, 2024 | 5:38 PM

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ ‘ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಬಾವುಟ ಹಾರಿಸಿದ್ದರು. ಆದರೆ, ರಾಷ್ಟ್ರಧ್ವಜ ಹಾರಿಸಲು ನಾವು ಸೂಚಿಸಿದ್ದೇವೆ ಎಂದಿದ್ದಾರೆ.

ಚಿತ್ರದುರ್ಗ, ಜ.28: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ ‘ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಬಾವುಟ ಹಾರಿಸಿದ್ದರು. ಆದರೆ, ರಾಷ್ಟ್ರಧ್ವಜ ಹಾರಿಸಲು ನಾವು ಸೂಚಿಸಿದ್ದೇವೆ ಎಂದಿದ್ದಾರೆ. ಇನ್ನು ಈ ಪ್ರಕರಣಕ್ಕೆ ವಿಪಕ್ಷ ನಾಯಕ ಆರ್​‘ ಅಶೋಕ ಕಿಡಿಕಾರಿದ್ದು, ‘ಸಿದ್ದರಾಮಯ್ಯ ರಾಮ, ಹನುಮ ವಿರೋಧಿ. ಈ ಹಿಂದೂಗಳ ವಿರೋಧಿ ಸರ್ಕಾರ ಉಳಿಯಬಾರದು. ಹನುಮಧ್ವಜ ಇಳಿಸೋಕೆ ದಾಖಲೆ ಸೃಷ್ಟಿ ಮಾಡಿಕೊಂಡಿದ್ದಾರೆ. ಹನುಮ ಹುಟ್ಟಿದ ನಾಡಲ್ಲಿ ಹನುಮನಿಗೆ ಈ ಸರ್ಕಾರ ಅವಮಾನ, ದ್ರೋಹ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More