AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ

ಹರೀಶ್ ಜಿ.ಆರ್​.
| Edited By: |

Updated on: Jan 01, 2026 | 9:36 PM

Share

ರಾಜ್ಯ ರಾಜಕೀಯದಲ್ಲಿ ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ 2026-27ರ ಬಜೆಟ್ ಮಂಡನೆಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಜೆಟ್ ಸಿದ್ಧತೆಗಳು ಈ ತಿಂಗಳಿನಿಂದಲೇ ಆರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ 2026 ಎಲ್ಲರ ಬಾಳಲ್ಲಿ ಸುಖ ಸಂತಸ ತರಲಿ ಎಂದು ಹಾರೈಸಿದ್ದಾರೆ. ವಿಡಿಯೋ ನೋಡಿ.

ಬೆಂಗಳೂರು, ಜನವರಿ 01: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಪಟ್ಟದ ಪೈಟ್​​ ಮಧ್ಯೆ ಸಿಎಂ ಸಿದ್ದರಾಮಯ್ಯ 2026-27ರ ರಾಜ್ಯ ಬಜೆಟ್ ಮಂಡಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಬಜೆಟ್ ಮಂಡನೆಗೆ ಸಿದ್ಧತೆಗಳು ನಡೆಯುತ್ತಿವೆ. ಜನವರಿಯಲ್ಲಿ ಬಜೆಟ್ ಸಿದ್ಧತೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More