ದಕ್ಷಿಣ ಕನ್ನಡ ಜಿಲ್ಲೆಗೆ ಅಧಿಕೃತ ಭೇಟಿ ನೀಡುವುದಾಗಿ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳ ಡಿಸಿ ಮತ್ತು ಸಿಇಓಗಳ ಜೊತೆ ಇವತ್ತು ಮತ್ತು ನಾಳೆ ವಿಡಿಯೋ ಕಾನ್ಫರೆನ್ಸಿಂಗ್ ನಡೆಸಿ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಾವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ಜೂನ್ 3 ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆಯಾಗಲಿದೆ.
ಬೆಂಗಳೂರು, ಮೇ 29: ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರ ಮನೆಯಿಂದ ಹೊರಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಿನ ಉಪಹಾರಕ್ಕಾಗಿ ಕರೆದಿದ್ದರು ಹಾಗಾಗಿ ಬಂದಿದ್ದೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು. ಸಿದ್ದರಾಮಯ್ಯ ಕೊನೆಗೂ ದಕ್ಷಿಣ ಕನ್ನಡ ಜಿಲ್ಲೆಗೆ ಅಧಿಕೃತ ಭೇಟಿ ನೀಡಲು ನಿರ್ಧರಿಸುವುದು ಸಂತಸದ ಸಂಗತಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲಿ ವಿಶೇಷವಾಗಿ ಮಂಗಳೂರು ನಗರದಲ್ಲಿ ಜನ ಸೌಹಾರ್ದತೆಯಿಂದ ಬಾಳುವುದು ಅತ್ಯವಶ್ಯಕವಾಗಿದೆ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ (communities of Hindu and Muslim) ಜನ ಸಾಮರಸ್ಯದಿಂದ ಬಾಳಿದರೆ ಕೋಮು ದೇಷಕ್ಕೆ ಅವಕಾಶವಿರೋದಿಲ್ಲ ಎಂದು ಸಿದ್ದರಾಮಯ್ಯ ಹೇಳುವಾಗಲೇ ಹರಿಪ್ರಸಾದ್, ಮಂಗಳೂರು ವಿಷಯವನ್ನು ಮುಖ್ಯಮಂತ್ರಿ ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರನ್ನು ಮತ್ತೊಮ್ಮೆ ಹಾಡಿ ಹೊಗಳಿದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

