Good news poor class: ಇಂದಿರಾ ಕ್ಯಾಂಟೀನ್ಗಳಿಗೆ ಮರುಜೀವ ನೀಡಲು ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಪಾಲಿಕೆ ವ್ಯಾಪ್ತಿಯ ಕಾಂಟೀನ್ ಗಳನ್ನು ಸರ್ಕಾರ ಮತ್ತು ಪಾಲಿಕೆ ಶೇಕಡ 50-50 ರ ಸಹಭಾಗಿತ್ವದಲ್ಲಿ ನಡೆಸಲು ನಿಶ್ಚಯಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಬೆಂಗಳೂರು: ನಗರದ ಜನ ಬಹಳ ಕಾತುರದಿಂದ ನಿರೀಕ್ಷಿಸುತ್ತಿದ್ದ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಮಾಡಿದರು. ಸಿದ್ದರಾಮಯ್ಯ ಮೊದಲ ಅವಧಿಯ ಸರ್ಕಾರ ಅಧಿಕಾರ ಕಳೆದುಕೊಂಡ ಬಳಿಕ ನೇಪಥ್ಯಕ್ಕೆ ಸರಿದಿದ್ದ ಬಡವರ, ಕಾರ್ಮಿಕರ, ವಿದ್ಯಾರ್ಥಿಗಳ ನೆಚ್ಚಿನ ಉಪಹಾರ ಕೇಂದ್ರ (eateries) ಇಂದಿರಾ ಕ್ಯಾಂಟೀನ್ಗಳನ್ನು (Indira canteen) ಪುನರಾರಂಭಿಸಲು ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಬಿಬಿಎಮ್ ಪಿಯ ಪ್ರತಿವಾರ್ಡ್ ಗೆ ಒಂದರಂತೆ ಒಟ್ಟು 250 ಕ್ಯಾಂಟೀನ್ ಶುರುಮಾಡುವ ಇರಾದೆ ಸರ್ಕಾರಕ್ಕಿದೆ ಎಂದು ಸಿದ್ದರಾಮಯ್ಯ ಹೇಳಿದರು. ಪಾಲಿಕೆ ವ್ಯಾಪ್ತಿಯ ಕಾಂಟೀನ್ ಗಳನ್ನು ಸರ್ಕಾರ ಮತ್ತು ಪಾಲಿಕೆ ಶೇಕಡ 50-50 ರ ಸಹಭಾಗಿತ್ವದಲ್ಲಿ ನಡೆಸಲು ನಿಶ್ಚಯಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
