Good news poor class: ಇಂದಿರಾ ಕ್ಯಾಂಟೀನ್​ಗಳಿಗೆ ಮರುಜೀವ ನೀಡಲು ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jun 12, 2023 | 5:08 PM

ಪಾಲಿಕೆ ವ್ಯಾಪ್ತಿಯ ಕಾಂಟೀನ್ ಗಳನ್ನು ಸರ್ಕಾರ ಮತ್ತು ಪಾಲಿಕೆ ಶೇಕಡ 50-50 ರ ಸಹಭಾಗಿತ್ವದಲ್ಲಿ ನಡೆಸಲು ನಿಶ್ಚಯಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಬೆಂಗಳೂರು: ನಗರದ ಜನ ಬಹಳ ಕಾತುರದಿಂದ ನಿರೀಕ್ಷಿಸುತ್ತಿದ್ದ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಮಾಡಿದರು. ಸಿದ್ದರಾಮಯ್ಯ ಮೊದಲ ಅವಧಿಯ ಸರ್ಕಾರ ಅಧಿಕಾರ ಕಳೆದುಕೊಂಡ ಬಳಿಕ ನೇಪಥ್ಯಕ್ಕೆ ಸರಿದಿದ್ದ ಬಡವರ, ಕಾರ್ಮಿಕರ, ವಿದ್ಯಾರ್ಥಿಗಳ ನೆಚ್ಚಿನ ಉಪಹಾರ ಕೇಂದ್ರ (eateries) ಇಂದಿರಾ ಕ್ಯಾಂಟೀನ್​ಗಳನ್ನು (Indira canteen) ಪುನರಾರಂಭಿಸಲು ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಬಿಬಿಎಮ್ ಪಿಯ ಪ್ರತಿವಾರ್ಡ್ ಗೆ ಒಂದರಂತೆ ಒಟ್ಟು 250 ಕ್ಯಾಂಟೀನ್ ಶುರುಮಾಡುವ ಇರಾದೆ ಸರ್ಕಾರಕ್ಕಿದೆ ಎಂದು ಸಿದ್ದರಾಮಯ್ಯ ಹೇಳಿದರು. ಪಾಲಿಕೆ ವ್ಯಾಪ್ತಿಯ ಕಾಂಟೀನ್ ಗಳನ್ನು ಸರ್ಕಾರ ಮತ್ತು ಪಾಲಿಕೆ ಶೇಕಡ 50-50 ರ ಸಹಭಾಗಿತ್ವದಲ್ಲಿ ನಡೆಸಲು ನಿಶ್ಚಯಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.