Siddaramaiah Speaks; ಹಿಂದಿನ ಪತ್ರಕರ್ತರು ಶೋಷಿತ, ದಮನಿತರ ದನಿಯಾಗಿದ್ದರು: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ

Updated on: Jul 24, 2023 | 5:16 PM

ಪ್ರತಿಯೊಬ್ಬ ವ್ಯಕ್ತಿಗೆ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಹೋದರೆ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾರ್ಥಕವೆನಿಸದು ಎಂದು ಮುಖ್ಯಮಂತ್ರಿ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಹಿಂದಿನ ಪತ್ರಕರ್ತರ ಸಾಮಾಜಿಕ ಕಳಕಳಿ ಮತ್ತು ಬದ್ಧತೆಗಳನ್ನು (social commitment) ಉಲ್ಲೇಖಿಸಿದರು. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ಪತ್ರಕರ್ತರಿದ್ದರು, ಶೋಷಿತರ, ದಮನಿತರ ದನಿಯಾಗಿ ಅವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಅವರು ಮಾಡುತ್ತಿದ್ದರು ಎಂದು ಮುಖ್ಯಮಂತ್ರಿ ಹೇಳಿದರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಕಳೆದರೂ ಸಂಪೂರ್ಣ ಸಾಕ್ಷರತೆ ಪ್ರಮಾಣ (literacy rate) ಸಾಧಿಸುವುದು ಭಾರತಕ್ಕೆ ಸಾಧ್ಯವಾಗಿಲ್ಲ, ಶೇಕಡ 24 ರಷ್ಟು ಅವಿದ್ಯಾವಂತರು ನಮ್ಮ ನಡುವೆ ಈಗಲೂ ಇದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಭಾರತೀಯರಿಗೆ ಕೇವಲ ರಾಜಕೀಯ ಸ್ವಾತಂತ್ರ್ಯ ಮಾತ್ರ ಸಿಕ್ಕಿದೆ, ಪ್ರತಿಯೊಬ್ಬ ವ್ಯಕ್ತಿಗೆ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಹೋದರೆ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾರ್ಥಕವೆನಿಸದು ಎಂದು ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.