ಮುಸ್ಲಿಮರನ್ನೆಲ್ಲಾ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಸಿದ್ದರಾಮಯ್ಯ ಹೀಗೆಂದಿದ್ಯಾಕೆ ನೋಡಿ!

Updated on: Apr 04, 2026 | 1:01 PM

ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಯತ್ನಾಳ್ ಅವರ ಆಕ್ಷೇಪಾರ್ಹ ಹೇಳಿಕೆಗಳಾದ ಮಸೀದಿ ಕೆಡವುವಿಕೆ ಮತ್ತು 3000 ರೂ. ಘೋಷಣೆಗಳನ್ನು ಖಂಡಿಸಿದ್ದಾರೆ. ದ್ವೇಷದ ರಾಜಕಾರಣದ ಬದಲು ಅಭಿವೃದ್ಧಿ ಬಗ್ಗೆ ಮಾತನಾಡಬೇಕು ಎಂದು ಸಿಎಂ ಪ್ರತಿಪಾದಿಸಿದರು. ಪ್ರತಾಪ್ ಸಿಂಹ ಅಶ್ಲೀಲ ಹೇಳಿಕೆ ಬಗ್ಗೆಯೂ ಖಂಡಿಸಿದ್ದಾರೆ.

ಬಾಗಲಕೋಟೆ, ಏಪ್ರಿಲ್ 4: ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಪ್ರಚಾರ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷ ನಾಯಕರ ಹೇಳಿಕೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಸಭ್ಯ ಪದ ಬಳಸಿದ ಬಿಜೆಪಿ ನಾಯಕ ಪ್ರತಾಪ್ ಸಿಂಹಗೆ ಟಾಂಗ್ ಕೊಟ್ಟ ಅವರು, ಬಿಜೆಪಿ ಪರ ಪ್ರಚಾರದ ವೇಳೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ ಹೇಳಿಕೆಗಳನ್ನೂ ಖಂಡಿಸಿದರು. ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳು ಮತ್ತು ಸಾಮಾಜಿಕ ಬದ್ಧತೆಯ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ ಮತ ಕೇಳುವುದಾಗಿ ಹೇಳಿದರು.

ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ, ತಾವು ಮುಖ್ಯಮಂತ್ರಿಯಾದರೆ ಮಹಿಳೆಯರಿಗೆ 3000 ರೂ. ನೀಡುವುದಾಗಿ ಮತ್ತು ಕಲ್ಲು ತೂರಾಟ ನಡೆಸಿದರೆ ಅಂತಹ ಮತ್ತು ಅಕ್ರಮವಾಗಿ ಕಟ್ಟಿದ ಮಸೀದಿಯನ್ನು ಬುಲ್ಡೋಜರ್ ಮೂಲಕ ಕೆಡವುವ ಹೇಳಿಕೆಯನ್ನು ಸಿದ್ದರಾಮಯ್ಯ ಖಂಡಿಸಿದರು. ಇಂತಹ ಹೇಳಿಕೆಗಳು ಸಾಮಾನ್ಯ ಜ್ಞಾನಕ್ಕೆ ವಿರುದ್ಧವಾಗಿವೆ ಮತ್ತು ರಾಜಕೀಯ ವ್ಯಕ್ತಿಗಳಿಗೆ ಅಸಮಂಜಸವಾಗಿವೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು. ಮುಸಲ್ಮಾನರು ಭಾರತದ ಜನಸಂಖ್ಯೆಯಲ್ಲಿ ಹೆಚ್ಚಿನ ಪಾಲು ಹೊಂದಿದ್ದು, ಅವರನ್ನು ದೇಶದಿಂದ ಹೊರಹಾಕಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ದ್ವೇಷದ ರಾಜಕಾರಣ ಸಹಿಸಲಾಗದು ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More