ಸುಧಾಮೂರ್ತಿ ದಂಪತಿ ಸಮೀಕ್ಷೆ ನಿರಾಕರಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ: ಹೇಳಿದ್ದಿಷ್ಟು

Updated on: Oct 18, 2025 | 8:12 AM

ಜಾತಿ ಗಣತಿ ಶುರುವಾಗಿ 27 ದಿನಗಳೇ ಕಳೆದರೂ ಸಮೀಕ್ಷೆ ಸಂಘರ್ಷ ನಿಲ್ತಿಲ್ಲ. ಕೆಲವರು ಸಮೀಕ್ಷೆಗೆ ಸ್ಪಂದಿಸಿದರೆ, ಇನ್ನೂ ಕೆಲವರು ನಿರಾಕರಿಸ್ತಿದ್ದಾರೆ. ಇತ್ತೀಚೆಗೆ ಸುಧಾಮೂರ್ತಿ ದಂಪತಿ ಸಮೀಕ್ಷೆಗೆ ನಿರಾಕರಿಸಿದ್ದರು. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು, ಅಕ್ಟೋಬರ್​ 18: ರಾಜ್ಯ ಸರ್ಕಾರ ಸೆಪ್ಟೆಂಬರ್​ 22 ರಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಆರಂಭಿಸಿದಾಗಿನಿಂದ್ಲೂ, ಗಣತಿ ಜಟಾಪಟಿ ನಡೀತಾನೆ ಇದೆ. ಮೊನ್ನೆಯಷ್ಟೇ ಇನ್ಫೋಸಿಸ್​ ಸುಧಾಮೂರ್ತಿ ದಂಪತಿ ಸಮೀಕ್ಷೆಗೆ ನಿರಾಕರಿಸಿದ್ದರು. ಇದು ಹಿಂದುಳಿದವರ ಸಮೀಕ್ಷೆ.. ನಾವು ಪಾಲ್ಗೊಳ್ಳಲ್ಲ ಅನ್ನೋ ಹಿಂಬರಹ ಬರೆದು ಕಳಿಸಿದ್ದರು. ಇದೇ ವಿಚಾರ ಕಾಂಗ್ರೆಸ್ ನಾಯಕರನ್ನ ಕೆರಳಿಸಿದೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಇದು ಹಿಂದುಳಿದವರ ಸಮೀಕ್ಷೆಯಲ್ಲ. ಸುಧಾಮೂರ್ತಿ ದಂಪತಿ ತಪ್ಪು ತಿಳಿದಿದ್ದಾರೆ. ಇದು ಕೇವಲ ಹಿಂದುಳಿದವರ ಸಮೀಕ್ಷೆ ಅನ್ನೋ ಭಾವನೆ ತಪ್ಪು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More