ಕಳಪೆ ಔಷಧ ಕೊಟ್ಟ ಕಂಪನಿ ಬ್ಲಾಕ್ ಲಿಸ್ಟ್ಗೆ ಸೇರಿಸಲಾಗಿದೆ: ಸಿಎಂ ಸಿದ್ದರಾಮಯ್ಯ
ಬಳ್ಳಾರಿಯಲ್ಲಿ ಬಾಣಂತಿಯ ಸಾವಿನ ಪ್ರಕರಣ ಸತ್ಯವೆಂದು ಸಿಎಂ ಸಿದ್ದರಾಮಯ್ಯ ಖಚಿತಪಡಿಸಿದ್ದಾರೆ. ಕಳಪೆ ಔಷಧ ನೀಡಿದ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಮತ್ತು ಅದನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸಲು ಸೂಚಿಸಲಾಗಿದೆ. ಡ್ರಗ್ ಕಂಟ್ರೋಲರ್ ಅಮಾನತುಗೊಂಡಿದ್ದಾರೆ ಮತ್ತು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದಿದ್ದಾರೆ.
ಹುಬ್ಬಳ್ಳಿ, ಡಿಸೆಂಬರ್ 08: ಬಳ್ಳಾರಿಯಲ್ಲಿ ಬಾಣಂತಿಯ ಸಾವು ಪ್ರಕರಣ ನಿಜ. ಕಳಪೆ ಔಷಧಿ ಕೊಟ್ಟ ಕಂಪನಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಕಳಪೆ ಔಷಧ ಕೊಟ್ಟ ಕಂಪನಿ ಬ್ಲಾಕ್ ಲಿಸ್ಟ್ಗೆ ಸೇರಿಸಲು ಹೇಳಿದ್ದೆನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ ಕಂಟ್ರೋಲರ್ ಅವರನ್ನು ಅಮಾನತು ಮಾಡಲಾಗಿದೆ. ಇದರ ಜೊತೆಗೆ ಒಂದು ಕಮಿಟಿ ರಚನೆ ಮಾಡಲಾಗಿದೆ. ಆ ಕಮಿಟಿ ವರದಿ ನೀಡಿದ ಬಳಿಕ ಮುಂದಿನ ಕ್ರಮಕೈಗೊಳ್ಳುತ್ತೇವೆ. ಮೃತರ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ನಿಡುತ್ತೇವೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos