ಕೆರೆ ಹಾಡಿಯಲ್ಲಿ ಮಕ್ಕಳೊಂದಿಗೆ ಕೋಲು ಬಾರಿಸುತ್ತಾ ಜಾನಪದ ನೃತ್ಯಕ್ಕೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ
ನಮ್ಮ ವರದಿಗಾರ ನೀಡಿರುವ ಮಾಹಿತಿ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆರೆ ಹಾಡಿಯ ಪಡಸಾಲೆಯಲ್ಲಿ ಕೂತು ಅಲ್ಲಿಯ ಜನರ ಸಮಸ್ಯೆಗಳನ್ನು ಆಲಿಸಿದರು. ಉಪ ಚುನಾವಣೆ ಮುಗಿದ ನಂತರ ಸಿಎಂ ಕೊಂಚ ಗೆಲುವಾದಂತೆ ಕಾಣುತ್ತದೆ. ಸ್ಥಳೀಯ ಶಾಸಕ ಅನಿಲ್ ಚಿಕ್ಕ ಮಾದು, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತು ಸಂಸದ ಸುನಿಲ್ ಬೋಸ್ ಸಿಎಂ ಸಿದ್ದರಾಮಯ್ಯ ಜೊತೆಗಿದ್ದರು.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಡು-ಕುಣಿತ-ಜಾನಪದ ಕಲೆಗಳಲ್ಲಿ ವಿಶೇಷ ಆಸಕ್ತಿ, ಅಭಿರುಚಿ. ಇವತ್ತು ಜಿಲ್ಲೆಯ ಹೆಚ್ ಡಿ ಕೋಟೆಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿಯವರು, ಕೆರೆ ಹಾಡಿಗೆ ತೆರಳಿ ಮಕ್ಕಳ ಜಾನಪದ ನೃತ್ಯವನ್ನು ವೀಕ್ಷಿಸಿದರು. ಮಕ್ಕಳ ನೃತ್ಯ ಅವರನ್ನು ಎಷ್ಟು ಮೋಡಿ ಮಾಡಿತೆಂದರೆ, ಕೋಲುಗಳನ್ನು ತೆಗೆದುಕೊಂಡು ಅವುಗಳನ್ನು ಬಾರಿಸುತ್ತ ಅವರೊಂದಿಗೆ ಹೆಜ್ಜೆ ಹಾಕಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮುಸ್ಲಿಂ ಸಮಾಜಕ್ಕೆ ಏನು ಕೊಟ್ಟಿದ್ದಾರೆ? ಇಬ್ರಾಹಿಂ ಪ್ರಶ್ನೆ