ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿ
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ಅವರ ಬಲ ಪಾರ್ಶ್ವದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕುಳಿತಿದ್ದರೆ ಎಡಭಾಗದಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಎಂಸಿ ಸುಧಾಕರ್ ಮುಖ್ಯಮಂತ್ರಿಗಳಿಗೆ ಏನನ್ನೋ ಹೇಳುತ್ತಿರವುದನ್ನು ವಿಡಿಯೋದಲ್ಲಿ ಗಮನಿಸಬಹುದು.
ಬೆಂಗಳೂರು: ಇಂದು ಭಾರತದ ಪ್ರಪ್ರಥಮ ಉಪ ರಾಷ್ಟ್ರಪತಿಯಾಗಿ ನೇಮಕಗೊಂಡು ನಂತರ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ಡಾ ಸರ್ವೆಪಲ್ಲಿ ರಾಧಾಕೃಷ್ಣನ್ (Dr Sarvepalli Radhakrishnan) ಅವರ ಜನ್ಮ ವಾರ್ಷಿಕೋತ್ಸವ (birth anniversary) ಅಂದರೆ ಶಿಕ್ಷಕರ ದಿನಾಚರಣೆ (Teachers’ day). ಭಾರತದೆಲ್ಲೆಡೆ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ಅವರ ಬಲ ಪಾರ್ಶ್ವದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕುಳಿತಿದ್ದರೆ ಎಡಭಾಗದಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಎಂಸಿ ಸುಧಾಕರ್ ಮುಖ್ಯಮಂತ್ರಿಗಳಿಗೆ ಏನನ್ನೋ ಹೇಳುತ್ತಿರವುದನ್ನು ವಿಡಿಯೋದಲ್ಲಿ ಗಮನಿಸಬಹುದು. ಸುಧಾಕರ್ ಹೇಳೋದನ್ನು ಹೇಳಿ ಹೊರಡಲು ಅಣಿಯಾದಾಗ ಸಿದ್ದರಾಮಯ್ಯ ಅವರನ್ನು ತಡೆದು ಕಿವಿಯಲ್ಲಿ ಏನನ್ನೋ ಹೇಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos