ವಿಶ್ವ ಬಂಟರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ, ಅಸೆಂಬ್ಲಿ ಸ್ಪೀಕರ್ ಯುಟಿ ಖಾದರ್ ಉಪಸ್ಥಿತಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 28, 2023 | 3:34 PM

ಅದಕ್ಕೂ ಮೊದಲು ವೇದಿಕೆ ಮೇಲಿದ್ದವರಿಗೆ ಎಳನೀರು ತಂದು ಕೊಟ್ಟಾಗಲೂ ಸಿದ್ದರಾಮಯ್ಯ ಪೇಪರ್ ನಲ್ಲಿದ್ದಿದನ್ನು ಓದುತ್ತಲೇ ಕುಡಿಯುತ್ತಾರೆ. ಮುಖ್ಯಮಂತ್ರಿ ಎಡಭಾಗದಲ್ಲಿ ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್, ಮತ್ತೊಂದು ಭಾಗದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಕೂತಿರುವುದನ್ನು ನೋಡಬಹುದು.

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಉಡುಪಿಯಲ್ಲಿ ಆಯೋಜಿಸಲಾಗಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ (World Bunts Convention) ಭಾಗಿಯಾಗಿದ್ದರು. ಬೆಂಗಳೂರುನಿಂದ ಮಂಗಳೂರಿಗೆ ವಿಮಾನದಲ್ಲಿ ತೆರಳಿದ ಅಲ್ಲಿಂದ ಉಡುಪಿಗೆ ರಸ್ತೆಮಾರ್ಗವಾಗಿ ಪಯಣಿಸಿದರು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮತ್ತು ಉಡುಪಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದರು. ವಿಶ್ವ ಬಂಟರ ಸಮ್ಮೇಳನ ವೇದಿಕೆಯಲ್ಲಿ ನಿರೂಪಕರು ವಿವರಣೆ ಮತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರಿಗೆ ಅಧ್ಯಕ್ಷೀಯ ಪೇಟ ತೊಡಿಸಬೇಕೆಂದು ಮನವಿ ಮಾಡಿದಾಗ ಏನ್ನನ್ನೋ ಓದುತ್ತಿದ್ದ ಸಿದ್ದರಾಮಯ್ಯ ಅದನ್ನು ಕೇಳಿಸಿಕೊಳ್ಳುವುದಿಲ್ಲ. ಅವರ ಬಲಭಾಗದದಲ್ಲಿ ಕುಳಿತಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿಯವರಿಗೆ ಮಾಡಬೇಕಿರುವುದರ ಬಗ್ಗೆ ಹೇಳುತ್ತಾರೆ. ಅದಕ್ಕೂ ಮೊದಲು ವೇದಿಕೆ ಮೇಲಿದ್ದವರಿಗೆ ಎಳನೀರು ತಂದು ಕೊಟ್ಟಾಗಲೂ ಸಿದ್ದರಾಮಯ್ಯ ಪೇಪರ್ ನಲ್ಲಿದ್ದಿದನ್ನು ಓದುತ್ತಲೇ ಕುಡಿಯುತ್ತಾರೆ. ಮುಖ್ಯಮಂತ್ರಿ ಎಡಭಾಗದಲ್ಲಿ ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್ (UT Khader), ಮತ್ತೊಂದು ಭಾಗದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಕೂತಿರುವುದನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.