ಏನು ಆಗುತ್ತೋ ಆಗಲಿ ಅಂದಿದ್ಯಾಕೆ? ಡಿಕೆಶಿ ಮನೆಯಲ್ಲಿ ಟಿಫನ್ ಬಳಿಕ ಸಿಎಂ ಶಾಕಿಂಗ್ ಮಾತು
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬಿಕ್ಕಟ್ಟು ಸದ್ಯ ಶಮನವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಮಾತುಕತೆ ಮೂಲಕ ಬಗೆರಿಸಿಕೊಂಡಿದ್ದಾರೆ. ಹೀಗಾಗಿ ಈ ಇವರಿಬ್ಬರ ನಡುವಿನ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಆದ್ರೆ, ಡಿಕೆಶಿ ಮನೆಯಲ್ಲಿ ಬ್ರೇಕ್ ಫಾಸ್ಟ್ ಮಾಡಿ ಬಂದ ಬಳಿಕ ಸಿದ್ದರಾಮಯ್ಯ ಅಚ್ಚರಿ ಮಾತುಗಳನ್ನಾಡಿದ್ದಾರೆ.
ಬೆಂಗಳೂರು,(ಡಿಸೆಂಬರ್ 02): ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬಿಕ್ಕಟ್ಟು ಸದ್ಯ ಶಮನವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಮಾತುಕತೆ ಮೂಲಕ ಬಗೆರಿಸಿಕೊಂಡಿದ್ದಾರೆ. ಹೀಗಾಗಿ ಈ ಇವರಿಬ್ಬರ ನಡುವಿನ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಆದ್ರೆ, ಡಿಕೆಶಿ ಮನೆಯಲ್ಲಿ ಬ್ರೇಕ್ ಫಾಸ್ಟ್ ಮಾಡಿ ಬಂದ ಬಳಿಕ ಸಿದ್ದರಾಮಯ್ಯ ಅಚ್ಚರಿ ಮಾತುಗಳನ್ನಾಡಿದ್ದಾರೆ.
ಇಂದು (ಡಿಸೆಂಬರ್ 02) ವಿಧಾನಸೌಧದ ಕೆಂಗಲ್ ಗೇಟ್ ಬಳಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು, ಈ ವೇಳೆ ಸಿಎಂ ಪ್ರಸ್ತುತ ರಾಜಕೀಯ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ರಾಜಕೀಯ ಯಾರಿಗೂ ಶಾಶ್ವತ ಅಲ್ಲ. ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ, ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ. ನನಗೆ ಯಾವತ್ತೂ ಕೂಡ ಬಹಳ ಯೋಚನೆ ಮಾಡಿ ಗೊತ್ತೇ ಇಲ್ಲ. ಏನು ಆಗುತ್ತೋ ಆಗಲಿ ಎಂದು ಮಾರ್ಮಿಕವಾಗಿ ಮಾತನಾಡಿದ್ದು, ಅಚ್ಚರಿಗೆ ಕಾರಣವಾಗಿದೆ.
