ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಹಲವಾರು ವಿಷಯಗಳ ಚರ್ಚೆ

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಹಲವಾರು ವಿಷಯಗಳ ಚರ್ಚೆ

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 09, 2023 | 12:28 PM

ಶಾಮನೂರು ವಿಷಯವಲ್ಲದೆ ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಪಕ್ಷದ ತಯಾರಿ, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷದ ಮೇಲಾಗವ ಪರಿಣಾಮ ಮೊದಲಾದ ಸಂಗತಿಗಳನ್ನು ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಅದಲ್ಲದೆ ಕೇಂದ್ರದ ನಾಯಕರನ್ನು ಭೇಟಿಯಾಗಿ ಬರ ಪರಿಹಾರ ನಿಧಿ ಹಾಗೂ ಕಾವೇರಿ ನದಿ ನೀರಿನ ಸಮಸ್ಯೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ದೆಹಲಿಯಲ್ಲಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯೊಂದನ್ನು ಕರೆದಿದ್ದು ಅದರಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ತೆರಳಿದ್ದಾರೆ. ವರ್ಷಾಂತ್ಯದಲ್ಲಿ ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಂಣ ಮಿಜೋರಾಂ ರಾಜ್ಯಗಳಲ್ಲಿ ವಿಧಾನ ಸಭಾ ಚುನಾವಣೆ (Assembly polls) ನಡೆಯಲಿರುವುದರಿಂದ ತಯಾರಿ, ಅಭ್ಯರ್ಥಿಗಳ ಆಯ್ಕೆ, ಪ್ರಚಾರ ಕಾರ್ಯಕ್ರಮ ಮೊದಲಾದ ವಿಷಯಗಳನ್ನು ಚರ್ಚಿಸಲು ಖರ್ಗೆ ಸಭೆ ಕರೆದಿದ್ದಾರೆ. ಕರ್ನಾಟಕ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯ ಪಕ್ಷದ ವರಿಷ್ಠರೊಂದಿಗೆ ಪ್ರತ್ಯೇಕವಾಗಿ ಚರ್ಚಸಲಿದ್ದಾರೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಅಂತ ಹೇಳಿ ವಿವಾದ ಸೃಷ್ಟಿ ಮಾಡಿದ್ದಾರೆ. ಶಾಮನೂರು ವಿಷಯವಲ್ಲದೆ ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಪಕ್ಷದ ತಯಾರಿ, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷದ ಮೇಲಾಗವ ಪರಿಣಾಮ ಮೊದಲಾದ ಸಂಗತಿಗಳನ್ನು ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಅದಲ್ಲದೆ ಕೇಂದ್ರದ ನಾಯಕರನ್ನು ಭೇಟಿಯಾಗಿ ಬರ ಪರಿಹಾರ ನಿಧಿ ಹಾಗೂ ಕಾವೇರಿ ನದಿ ನೀರಿನ ಸಮಸ್ಯೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ