AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ತೆರಳಿ ಪ್ರಧಾನಿ ಮೋದಿ ಮತ್ತು ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

ದೆಹಲಿಗೆ ತೆರಳಿ ಪ್ರಧಾನಿ ಮೋದಿ ಮತ್ತು ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 27, 2024 | 12:42 PM

Share

ಪ್ರಧಾನಿ ಮೋದಿ ಅವರು ಜೂನ್ 29 ಬೆಳಗ್ಗೆ 8ಗಂಟೆಗೆ ಭೇಟಿ ಮಾಡಲು ಸಮಯ ನೀಡಿದ್ದಾರೆ, ಭೂ ಸಾರಿಗೆ ಸಚಿವರನ್ನು ಭೇಟಿಯಾಗಲು ಈಗಾಗಲೇ ಸಮಯಾವಕಾಶ ಸಿಕ್ಕಿದೆ, ಆದರೆ ಗೃಹ ಸಚಿವ ಅಮಿತ್ ಶಾ ಅವರು ಇನ್ನೂ ಅಪಾಯಿಂಟ್ಮೆಂಟ್ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವಿನ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಹೋಗುತ್ತಿದ್ದಾರೆ. ನಗರದಲ್ಲಿಂದು ತಮ್ಮ ಪ್ರವಾಸ ಮತ್ತು ಉದ್ದೇಶದ ಬಗ್ಗೆ ಮಾಹಿತಿ ನೀಡಿದ ಅವರು, ದೆಹಲಿಯಲ್ಲಿ ರಾಜ್ಯದಿಂದ ನೂತನವಾಗಿ ಅಯ್ಕೆಯಾಗಿರುವ ಸಂಸದರನ್ನು ಮತ್ತು ರಾಜ್ಯಸಭಾ ಸದಸ್ಯರನ್ನು ಭೇಟಿಯಾಗುವುದಾಗಿ ಹೇಳಿದರು. ಅವರೊಂದಿಗೆ ಸಭೆ ನಡೆಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ, ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಗೃಹ ಸಚಿವ ಅಮಿತ್ ಶಾ, ಮತ್ತು ರೇಲ್ವೇ ಇಲಾಖೆ ಸಚಿವರನ್ನು ಭೇಟಿಯಾಗುವದರ ಜೊತೆಗೆ ರಾಜ್ಯದಿಂದ ಅಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಿರುವವರನ್ನು ಸಹ ಭೇಟಿಯಾಗುವುದಾಗಿ ಮುಖ್ಯಮಂತ್ರಿ ಹೇಳಿದರು. ಕೇಂದ್ರ ಸರ್ಕಾರವು ರಾಜ್ಯಕ್ಕೆ ಘೋಷಿಸಿರುವ ಯೋಜನೆಗಳ ಅನುಷ್ಠಾನ ಮತ್ತು ಅನುದಾನ ಬಿಡುಗಡೆ, ಮತ್ತು ರಾಜ್ಯಕ್ಕೆ ಸಂಪನ್ಮೂಲಗಳನ್ನು ಹೆಚ್ಚಿಸುವುದಕ್ಕೋಸ್ಕರ ಪ್ರಧಾನ ಮಂತ್ರಿ ಮತ್ತು ಇತರ ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕದಿಂದಲೇ ರಾಜ್ಯಸಭಾ ಸದಸ್ಯರಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನೂ ಭೇಟಿಯಾಗುವುದಾಗಿ ಮುಖ್ಯಮಂತ್ರಿ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ಬೇಡ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ