ಬಣ್ಣಬಣ್ಣದ ದೀಪಗಳಿಂದ ಜಗಮಗಿಸುತ್ತಿರುವ ಆಲಮಟ್ಟಿ ಡ್ಯಾಂ ಟೂರ್​​ ಮಾಡೋಣಾ ಬನ್ನೀ

| Updated By: ಸಾಧು ಶ್ರೀನಾಥ್​

Updated on: Sep 02, 2023 | 10:31 AM

ವಿಜಯಪುರ ಜಿಲ್ಲೆ, ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಇರುವ ಕೃಷ್ಣಾ ನದಿಗೆ ನಿರ್ಮಾಣ ಮಾಡಲಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರದಲ್ಲಿ ಹಬ್ಬದ ವಾತಾವರಣ. ಮದುವಣಗಿತ್ತಿಯಂತೆ ಶೃಂಗಾರಗೊಂಡ ಆಲಮಟ್ಟಿ ಡ್ಯಾಂ ಆವರಣ. ಸಿಎಂ ಸಿದ್ದರಾಮಯ್ಯ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಕೃಷ್ಣಾ ನದಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಲಿದ್ದಾರೆ.

ವಿಜಯಪುರ: ಉತ್ತರ ಕರ್ನಾಟಕ ಭಾಗದ ಜೀವನದಿ ಕೃಷ್ಣೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಿದ್ದಾರೆ (Bagina to Krishna river at Alamatti dam). ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು ಮುಖಂಡರು ಹಾಗೂ ಆಧಿಕಾರಿಗಳು ಸಿಎಂಗೆ ಸಾಥ್ ನೀಡಲಿದ್ದಾರೆ. ಸಿಎಂ ಬಾಗಿನ ಸಮರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ಸುತ್ತಮುತ್ತ ಬಣ್ಣ ಬಣ್ಣದ ಲೈಟಿಂಗ್ಸ್​ನಿಂದ ಸಿಂಗರಿಸಲಾಗಿದೆ.

ವಿಜಯಪುರ ಜಿಲ್ಲೆ, ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಇರುವ ಕೃಷ್ಣಾ ನದಿಗೆ ನಿರ್ಮಾಣ ಮಾಡಲಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರದಲ್ಲಿ ಹಬ್ಬದ ವಾತಾವರಣ. ಮದುವಣಗಿತ್ತಿಯಂತೆ ಶೃಂಗಾರಗೊಂಡ ಆಲಮಟ್ಟಿ ಡ್ಯಾಂ ಆವರಣ. ಸಿಎಂ ಸಿದ್ದರಾಮಯ್ಯ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಸೇರಿದಂತೆ ಇನ್ನಿತರ ಸಚಿವರು ಕೃಷ್ಣಾ ನದಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಲಿದ್ದಾರೆ. ಬಾಗಿನ ಅರ್ಪಣೆ ಹಾಗೂ ಗಂಗಾಪೂಜೆಗಾಗಿ ಸಕಲ ಸಿದ್ಧತೆ ನಡೆದಿದೆ.

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಜಿಂದಾಲ್ ಗೆ ಆಗಮಿಸಿ ಜಿಂದಾಲ್ ಮೂಲಕ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಆಲಮಟ್ಟಿಗೆ ಆಗಮಿಸಲಿರುವ ಸಿಎಂ ಆಲಮಟ್ಟಿಯ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ಡ್ಯಾಂ ಸೈಟ್ ಗೆ ತೆರಳಿ, ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಣೆ ಮಾಡಲಿದ್ದಾರೆ. ಬಳಿಕ ಕೆಬಿಜೆನ್ ಎಂಡಿ ಕಚೇರಿಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಹಾಗೂ ಇನ್ನಿತರ ಸಚಿವರು ಸಭೆ ನಡೆಸಲಿದ್ದಾರೆ.

Follow us on