ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುವುದು ನಿಶ್ಚಿತ: ಭವಿಷ್ಯ ನುಡಿದ ಯಡಿಯೂರಪ್ಪ
ಮುಡಾ ಸೈಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಮತ್ತು ಜೆಡಿಎಸ್ ಪಾದಯಾತ್ರೆ ಇಂದಿನಿಂದ ಆರಂಭವಾಗಿದೆ. ಪಾದಯಾತ್ರೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಪಾದಯಾತ್ರೆ ಮುಗಿಯುವುದರೊಳಗೆ ನೂರಕ್ಕೆ ನೂರರಷ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ಬೆಂಗಳೂರು, ಆಗಸ್ಟ್ 3: ಮುಡಾ ಸೈಟ್ ಹಗರಣ ಮತ್ತು ವಾಲ್ಮೀಕಿ ಹಗರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ಇಂದು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ (Padayatra) ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಭಾಗವಹಿಸಿದ್ದು, ಪಾದಯಾತ್ರೆ ಮುಗಿಯುವುದರೊಳಗೆ ನೂರಕ್ಕೆ ನೂರರಷ್ಟು ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡುತ್ತಾರೆ ಎಂದು ಹೇಳಿದ್ದಾರೆ. ಈ ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos