ಬಿಹಾರ್ನಲ್ಲಿ ಎಸ್ಐಆರ್ ವಿರುದ್ಧ ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಭಾಗಿಯಾಗಲಿರುವ ಸಿದ್ದರಾಮಯ್ಯ
ಕಳೆದ ಲೋಕಸಭಾ ಚುನಾವಣೆ ಮತ್ತು ಬೇರೆ ಬೇರೆ ವಿಧಾನಸಭಾ ಚುನಾವಣೆಗಳಲ್ಲಿ ಅಕ್ರಮ ನಡೆದಿದೆಯೆಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಅಭಿಯಾನ ನಡೆಸುತ್ತಿದ್ದಾರೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಮಹದೇವಪುರ ವಿಧಾನಸಭಾ ಮತಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರಿರುವರೆಂದು ಅವರು ಆರೋಪಿಸಿದ್ದಾರೆ.
ಬೆಂಗಳೂರು, ಆಗಸ್ಟ್ 22: ವಿಧಾನಸೌಧದ ಅವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಹಾರ್ನಲ್ಲಿ ಎಸ್ಐಆರ್ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನಡೆಸುತ್ತಿರುವ ಪಾದಯಾತ್ರೆಯಲ್ಲಿ ತಾವು ಕೂಡ ಒಂದು ದಿನದ ಮಟ್ಟಿಗೆ ಪಾಲ್ಗೊಳ್ಳುವುದಾಗಿ ಹೇಳಿದರು. ಮೊದಲು ಇಂಗ್ಲಿಷ್ ಭಾಷೆಯಲ್ಲಿ ಹೇಳಿದ್ದನ್ನೇ ನಂತರ ಕನ್ನಡದಲ್ಲಿ ಹೇಳಿದ ಸಿದ್ದರಾಮಯ್ಯ, ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕನಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಅಕ್ರಮಗಳ ಬಗ್ಗೆ ಬಿಹಾರ ರಾಜ್ಯದಲ್ಲಿ 16 ದಿನಗಳ ಕಾಲ ಪಾದಯಾತ್ರೆ ನಡೆಸುತ್ತಿದ್ದಾರೆ, ತಾನು ಇದೇ ತಿಂಗಳು 29 ನೇ ತಾರೀಖು ಅವರೊಂದಿಗೆ ಪಾದಯಾತ್ರೆ ಮಾಡುವವನಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಜಮೀರ್ರನ್ನು ಛೇಡಿಸಲು ಹೋಗಿ ಸಿದ್ದರಾಮಯ್ಯರಿಂದ ಬುದ್ಧಿಮಾತು ಹೇಳಿಸಿಕೊಂಡ ಅರವಿಂದ್ ಬೆಲ್ಲದ್
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ