ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸುವ ಮೊದಲು ನೇಹಾ ಹಿರೇಮಠ ಮನೆಗೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸುವ ಮೊದಲು ನೇಹಾ ಹಿರೇಮಠ ಮನೆಗೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Apr 25, 2024 | 1:39 PM

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ರಂದೀಪ್ ಸುರ್ಜೆವಾಲಾ ನಿನ್ನೆ ನಿರಂಜನ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರದಂದು ನಿರಂಜನ ಮನೆಗೆ ಆಗಮಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ನಿರಂಜನ ಕುಟುಂಬದೊಂದಿಗೆ ಮಾತಾಡಿದ ಬಳಿಕ ಹಾವೇರಿ ಜಿಲ್ಲೆಯ ತಡಸ ಕ್ರಾಸ್ ಬಳಿ ಆಯೋಜಿಸಲಾಗಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಹುಬ್ಬಳ್ಳಿ: ನಾವು ಈಗಾಗಲೇ ವರದಿ ಮಾಡಿರುವಂತೆ ನೇಹಾ ಹಿರೇಮಠ (Neha Hiremath) ಅವರ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭೇಟಿ ನೀಡಲಿದ್ದಾರೆ. ಬೀದರ್ ನಿಂದ ವಿಶೇಷ ವಿಮಾನವೊಂದರಿಂದ ಅವರು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಈಗ್ಗೆ ಸ್ವಲ್ಪ ಹೊತ್ತು ಮುಂಚೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು (CID sleuths) ನಿರಂಜನ್ ಹಿರೇಮಠ ಅವರ ಮನೆಗೆ ಭೇಟಿ ನೀಡಿದ್ದರು. ಹುಬ್ಬಳ್ಳಿಗೆ ಹೊರಡುವ ಮೊದಲು ಬೀದರ್ ನಲ್ಲಿ ಸುದ್ದಿಗೋಷ್ಟಿಯೊಂದರಲ್ಲಿ ಮಾತಾಡಿದ ಸಿದ್ದರಾಮಯ್ಯ ನೇಹಾ ಹಿರೇಮಠ ಹತ್ಯೆಯನ್ನು ಈಗಾಗಲೇ ಖಂಡಿಸಿದ್ದೇನೆ ಮತ್ತು ಈಗಲೂ ಖಂಡಿಸುತ್ತೇನೆ ಎಂದು ಹೇಳಿ ಪ್ರಕರಣದ ತನಿಖೆಯನ್ನು ಸಿಐಡಿ ವಹಿಸಿಕೊಡಲಾಗಿದೆ, ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವೊಂದನ್ನು ಸ್ಥಾಪಿಸಲಾಗುವುದು ಅಂತ ಹೇಳಿದ್ದರು. ಅವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ನಿರಂಜನ ಮನೆ ಸುತ್ತಮುತ್ತ ಪೊಲೀಸರನ್ನು ನಿಯೋಜಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ರಂದೀಪ್ ಸುರ್ಜೆವಾಲಾ ನಿನ್ನೆ ನಿರಂಜನ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರದಂದು ನಿರಂಜನ ಮನೆಗೆ ಆಗಮಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ನಿರಂಜನ ಕುಟುಂಬದೊಂದಿಗೆ ಮಾತಾಡಿದ ಬಳಿಕ ಹಾವೇರಿ ಜಿಲ್ಲೆಯ ತಡಸ ಕ್ರಾಸ್ ಬಳಿ ಆಯೋಜಿಸಲಾಗಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬರಪರಿಹಾರ ನಿಧಿ ಬಗ್ಗೆ ಗೃಹ ಸಚಿವರು ಹೇಳಿದ್ದನ್ನೇ ಸುಪ್ರೀಂ ಕೋರ್ಟ್​ನಲ್ಲಿ ಎಜಿ ಯಾಕೆ ಹೇಳಲಿಲ್ಲ? ಸಿದ್ದರಾಮಯ್ಯ