ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಪಾರ್ವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Updated on: Nov 18, 2025 | 8:01 AM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಜಿ.ಎಂ.ಪಾರ್ವತಿ ಅವರು ಆರೋಗ್ಯ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯಿಂದ ಮರಳಿದ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯ ಆರೋಗ್ಯ ವಿಚಾರಿಸಿದರು. ಸಿದ್ದರಾಮಯ್ಯ ಅವರ ಹೇಳಿಕೆಯ ಪ್ರಕಾರ, ಪಾರ್ವತಿ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಗಂಭೀರ ಸಮಸ್ಯೆಗಳಿಲ್ಲ.

ಬೆಂಗಳೂರು, ನವೆಂಬರ್​ 18: ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನಲೆ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಪತ್ನಿ ಬಿ.ಎಂ.ಪಾರ್ವತಿ ಅವರ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಪಾರ್ವತಿ ಅವರ ಆರೋಗ್ಯ ಸ್ಥಿರವಾಗಿದ್ದು, ಏನೂ ಸಮಸ್ಯೆ ಇಲ್ಲ. ಶ್ವಾಸಕೋಶ ಸೋಂಕಿನಿಂದ ಅವರು ಬಳಲುತ್ತಿದ್ದು, ಈಗ ಚೇತರಿಕೆ ಕಾಣುತ್ತಿದ್ದಾರೆ. ಇನ್ನೂ 2-3 ದಿನ ಆಸ್ಪತ್ರೆಯಲ್ಲಿರಬೇಕಾಗುತ್ತೆ ಎಂದು ವೈದ್ಯರು ತಿಳಿಸಿರೋದಾಗಿ ಅಪೋಲೋ ಆಸ್ಪತ್ರೆ ಬಳಿ ಸಿದ್ದರಾಮಯ್ಯ ಹೇಳಿದ್ದಾರೆ. ಪಾರ್ವತಿ ಅವರಿಗೆ ಐಸಿಯುನಲ್ಲಿ ಸದ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಡಾ. ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಅವರಿಗೆ ಟ್ರೀಟ್​ಮೆಂಟ್​ ನೀಡುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 18, 2025 08:00 AM
Follow Us
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More