Loading video

ಅಮೇರಿಕದಿಂದ ವಾಪಸ್ಸಾಗಿರುವ ಶಿವಣ್ಣ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

|

Updated on: Jan 27, 2025 | 2:08 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿರುವ ಸುದ್ದಿ ಗೊತ್ತಾಗುತ್ತಿದ್ದಂತೆಯೇ ಶಿವರಾಜ್ ಕುಮಾರ್ ಮನೆಯಿಂದ ಆಚೆ ತಮ್ಮ ಪತ್ನಿಯೊಂದಿಗೆ ಆಚೆ ಬಂದು ಸ್ವಾಗತಿಸಿದರು. ಶಿವಣ್ಣ ಸಿದ್ದರಾಮಯ್ಯನವರ ಪಾದಗಳಿಗೆ ನಮಸ್ಕರಿಸುವುದನ್ನು ದೃಶ್ಯಗಳಲ್ಲಿ ನೋಡಬಹುದು. ಸಿದ್ದರಾಮಯ್ಯ ಅವರೊಂದಿಗೆ ಸಚಿವ ಭೈರತಿ ಸುರೇಶ್ ಮತ್ತು ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜು ಇದ್ದರು.

ಬೆಂಗಳೂರು: ವರನಟ ದಿವಂಗತ ಡಾ ರಾಜ್ ಕುಮಾರ್ ಕುಟುಂಬದ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಅವಿನಾಭಾವ ಸಂಬಂಧ. ಡಾ ಶಿವರಾಜ್ ಕುಮಾರ್ ಅನಾರೋಗ್ಯದ ನಿಮಿತ್ತ ಅಮೇರಿಕ ತೆರಳಿ ಅಲ್ಲಿ ಆಪರೇಶನ್ ಮಾಡಿಸಿಕೊಂಡು ಸ್ವದೇಶಕ್ಕೆ ವಾಪಸ್ಸಾಗಿರುವ ವಿಷಯ ಗೊತ್ತಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಬೋಕೆಯೊಂದಿಗೆ ಮಾನ್ಯತಾ ಟೆಕ್ ಪಾರ್ಕ್​ನಲ್ಲಿರುವ ನಟನ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದರು. ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯೂ ಆಗಿದ್ದಾರೆ ಮತ್ತು ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಸ್ಪರ್ಧಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ

Published on: Jan 27, 2025 02:07 PM