ಮುಡಾ ಸಂಕಷ್ಟ ಪರಿಹಾರಕ್ಕಾಗಿ ನಾಡದೇವತೆ ಚಾಮುಂಡೇಶ್ವರಿ ಮೊರೆಹೊಕ್ಕ ಸಿಎಂ ಸಿದ್ದರಾಮಯ್ಯ

ಮುಡಾ ಸಂಕಷ್ಟ ಪರಿಹಾರಕ್ಕಾಗಿ ನಾಡದೇವತೆ ಚಾಮುಂಡೇಶ್ವರಿ ಮೊರೆಹೊಕ್ಕ ಸಿಎಂ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 03, 2024 | 11:27 AM

ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಾಧಿಕಾರ ರಚಿಸದಂತೆ ರಾಜಮಾತೆ ಪ್ರಮೋದಾದೇವಿಯವರು ಪಡೆದುಕೊಂಡಿದ್ದ ತಡೆಯಾಜ್ಞೆಯನ್ನು ಕೋರ್ಟ್ ತೆರವುಗೊಳಿಸಿದೆ.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಸಂಕಷ್ಟಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ, ವಿಚಾರನೆಯನ್ನು ಹೈಕೋರ್ಟ್ ಸೆಪ್ಟಂಬರ್ 9ಕ್ಕೆ ಮುಂದೂಡಿದೆ. ಇದೇ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ಪೂಜೆ ಸಲ್ಲಿಸಲು ಚಾಮುಂಡಿ ಬೆಟ್ಟಕ್ಕೆ ಆಗಮಿಸಲಿದ್ದಾರೆ. ಗಣ್ಯರ ಅಗಮನದ ಕಾರಣ ಚಾಮುಂಡಿ ಬೆಟ್ಟದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿರುವುದು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಂದೂಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ