ಮಂಡಿನೋವಿನಿಂದ ಚೇತರಿಸಿಕೊಂಡಿರೋ ಸಿದ್ದರಾಮಯ್ಯ ವಾಕಿಂಗ್ ಸ್ಟಿಕ್ ನೆರವಿನಿಂದ ಸದನದೊಳಗೆ ನಡೆದು ಹೋದರು

ಅರುಣ್​ ಕುಮಾರ್​ ಬೆಳ್ಳಿ

Updated on: Mar 17, 2025 | 12:16 PM

ಮನೆಯಿಂದ ವಿಧಾನಸೌಧಕ್ಕೆ ಕಾರಲ್ಲಿ ಬರುವ ಸಿಎಂ ಸಿದ್ದರಾಮಯ್ಯ ಕೂಡಲೇ ಕೆಳಗಿಳಿಯುವುದಿಲ್ಲ. ಅವರು ಬರುತ್ತಿರುವುದನ್ನು ನೋಡಿದ ಕೂಡಲೇ ಭದ್ರತಾ ದಳದ ಸಿಬ್ಬಂದಿ, ಅಂಗರಕ್ಷಕರು ಮತ್ತು ಪೊಲೀಸ್ ಓಡಿಬರುತ್ತಾರೆ. ಆದರೆ ಮುಖ್ಯಮಂತ್ರಿ ಫೋನಲ್ಲಿ ಯಾರೊಂದಿಗೋ ಮಾತಿನಲ್ಲಿ ಬ್ಯೂಸಿ. ಸುಮಾರು ಹೊತ್ತು ಅವರು ಫೋನಲ್ಲಿ ಮಾತಾಡುತ್ತಾರೆ.

ಬೆಂಗಳೂರು, 17 ಮಾರ್ಚ್: ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಅನುಭವಿಸುತ್ತಿದ್ದ ಮಂಡಿನೋವಿನಿಂದ (knee pain) ಚೇತರಿಸಿಕೊಂಡಂತಿದೆ. ಬಜೆಟ್ ಮಂಡನೆ, ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳುವುದು ಅಥವಾ ಬೇರೆ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿದ್ದರೂ ಅವರು ವ್ಹೀಲ್ ಚೇರ್​ನಲ್ಲಿ ಓಡಾಡುತ್ತಿದ್ದರು. ಆದರೆ ಇವತ್ತು ಸದನದ ಕಲಾಪದಲ್ಲಿ ಭಾಗವಹಿಸಲು ಅವರು ವ್ಹೀಲ್ ಚೇರ್ ಬದಲು ಊರುಗೋಲಿನ ನೆರವಿನೊಂದಿಗೆ ವಿಧಾನಸೌಧಕ್ಕೆ ಬಂದು ಸದನದೊಳಗೆ ನಡೆದುಹೋದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಗ್ರಾಮೀಣ ಭಾಗದ ಜನರಿಗೆ ಗುಡ್​ನ್ಯೂಸ್: ಇ ಖಾತಾ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.