ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮೋನಮಃ ಎಂದು ಯಾಕೆ ಹೇಳಿದರು?

ಅರುಣ್​ ಕುಮಾರ್​ ಬೆಳ್ಳಿ

Updated on: Nov 15, 2023 | 4:53 PM

ಜೆಡಿಎಸ್ ನಾಯಕರು ಮತ್ತುಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾಲಿ ಮೂಡ್ ನಲ್ಲಿದ್ದರು. ಪಕ್ಷಕ್ಕೆ ಸೇರಿದವರೆಲ್ಲ ಹೆಸರುಗಳನ್ನು ಹೇಳುತ್ತಾ ಪಕ್ಷಕ್ಕೆ ಸ್ವಾಗತಿಸಿದ ಸಿದ್ದರಾಮಯ್ಯ ತಮ್ಮ ಮಾತಿನ ಮೋಡಿಯಿಂದ ಅಲ್ಲಿ ನೆರೆದಿದ್ದವರನ್ನು ರಂಜಿಸಿದರು.

ಬೆಂಗಳೂರು: ಇಂದು ಕೆಪಿಸಿಸಿ ಕಚೇರಿಯಲ್ಲಿ (KPCC office) ಜೆಡಿಎಸ್ ಪಕ್ಷದ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿಸಿ ಗೌರಿಶಂಕರ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್ ಮಂಜುನಾಥ ಹಾಗೂ ಬೊಮ್ಮನಹಳ್ಳಿ ಕ್ಷೇತ್ರ ಧುರೀಣ ಮತ್ತು 2018 ರಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಟಿ ಆರ್ ಬಸವರಾಜ (TR Basavaraj) ಮತ್ತು ಅವರೆಲ್ಲರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಜಾಲಿ ಮೂಡ್ ನಲ್ಲಿದ್ದರು. ಪಕ್ಷಕ್ಕೆ ಸೇರಿದವರೆಲ್ಲ ಹೆಸರುಗಳನ್ನು ಹೇಳುತ್ತಾ ಪಕ್ಷಕ್ಕೆ ಸ್ವಾಗತಿಸಿದ ಸಿದ್ದರಾಮಯ್ಯ ತಮ್ಮ ಮಾತಿನ ಮೋಡಿಯಿಂದ ಅಲ್ಲಿ ನೆರೆದಿದ್ದವರನ್ನು ರಂಜಿಸಿದರು. ಎಲ್ಲರ ಹೆಸರು ಹೇಳಿ ಸ್ವಾಗತಿಸಿದ ಬಳಿಕ ಅವರಾಡಿದ ಮಾತು ಜನರನ್ನು ನಗೆಗಡಲಲ್ಲಿ ಮುಳಗಿಸಿತು. ಅವರು ಹೇಳಿದ್ದೇನು ಅಂತ ನೀವೇ ಕೇಳಿಸಿಕೊಳ್ಳಿ: ಜೆಡಿಎಸ್ ನಾಯಕರ ಕುಟಿಲತನ ಮತ್ತು ಇಬ್ಬಗೆ ಧೋರಣೆಯನ್ನು ಬಹಳ ಬೇಗ ಅರ್ಥ ಮಾಡಿಕೊಂಡು ಅದರಿಂದ ಆಚೆ ಬಂದ ನಿಮ್ಮೆಲ್ಲರಿಗೆ ನಮೋನಮಃ ಎಂದು ಸಿದ್ದರಾಮಯ್ಯ ಹೇಳುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.