ರಾಜಕೀಯ ವೈರಿಗಳು ಮುಖಾಮುಖಿ: ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ

|

Updated on: Jun 27, 2024 | 7:48 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಭೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಎಂಪಿಗಳು ಆಗಮಿಸಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಭೆಗೆ ರಾಜಕೀಯ ವೈರತ್ವ ಮರೆತು ಎಲ್ಲರೂ ಭಾಗವಹಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕುಮಾರಸ್ವಾಮಿ ಅವರನ್ನು ಸಿದ್ದರಾಮಯ್ಯ ಅವರು ಕೈ ಕುಲುಕಿ ಬೆನ್ನು ತಟ್ಟಿ ಸ್ವಾಗತಿಸಿದರು.

ನವದೆಹಲಿ, (ಜೂನ್ 28): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂನ್ 27) ನವದೆಹಲಿಯಲ್ಲಿ ಕರ್ನಾಟಕದ ಎಲ್ಲಾ ಸಂಸದರ ಸಭೆ ನಡೆಸಿದ್ದು, ಸಭೆಯಲ್ಲಿ ಬಿಜೆಪಿಮ ಜೆಡಿಎಸ್ ಮತ್ತು ಕಾಂಗ್ರೆಸ್ ಸಂಸದರ ಭಾಗಿಯಾಗಿದ್ದಾರೆ. ದೆಹಲಿ ಖಾಸಗಿ ಹೋಟೆನಲ್ಲಿ ನಡೆಯುತ್ತಿರುವ ಸಭೆಗೆ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ಭಾಗಿಯಾಗುವುದು ಅನುಮಾನ ಎನ್ನಲಾಗಿತ್ತು. ಯಾಕಂದ್ರೆ, ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರನ್ನು ಕೈಬಿಡಲಾಗಿದ್ದು, ಇದರಿಂದ ಅವರು ಮುನಿಸಿಕೊಂಡಿದ್ದಾರೆ. ಹೀಗಾಗಿ ಅವರು ಇಂದಿನ ಸಭೆಯಲ್ಲಿ ಭಾಗಿಯಾವುದು ಅನುಮಾನವಾಗಿತ್ತು. ಆದ್ರೆ, ಕುಮಾರಸ್ವಾಮಿ ಸಭೆಗೆ ಆಗಮಿಸಿದ್ದು, ಅವರನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈ ಕುಲುಕಿ ಬೆನ್ನು ತಟ್ಟಿ ಸ್ವಾಗತ ಕೋರಿದ್ದಾರೆ.

ಇನ್ನು ಕುಮಾರಸ್ವಾಮಿ ಸಹ ನಗು ನಗುತ್ತಲೇ ಸಿಎಂಗೆ ಕೈ ಕುಲುಕಿ ನಮಸ್ಕರಿಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪ ಸಾಮಾನ್ಯ ಎನ್ನುವುದು ನಾಯಕರು ಸಾಬೀತು ಮಾಡಿದ್ದಾರೆ. ಅಲ್ಲದೇ ಪಾಲಿಟಿಕ್ಸ್‌ ಏನಿದ್ರೂ ಆಚೆಗೆ ಕರ್ನಾಟಕದ ಅಭಿವೃದ್ಧಿ ವಿಚಾರಕ್ಕೆ ಬಂದರೆ ದೋಸ್ತಿ ಎನ್ನುವುದನ್ನು ಸಂದೇಶ ರವಾನಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 27, 2024 07:45 PM