ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
Siddaramaiah Wife Parvathi hospitalized : ರಾಜ್ಯ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಸಂಬಂಧ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಟೆನ್ಷನ್ನಲ್ಲಿದ್ದು, ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ. ಇದರ ನಡುವೆ ಸಿದ್ದರಾಮಯ್ಯನವರ ಪತ್ನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರಿಗೆ ಐಸಿಯುನಲ್ಲಿ ಡಾ ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ಮುಂದುವರೆಸಿದೆ.
ಬೆಂಗಳೂರು (ನವೆಂಬರ್ 17): ಸದ್ಯ ರಾಜ್ಯ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಸಂಬಂಧ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಟೆನ್ಷನ್ನಲ್ಲಿದ್ದು, ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ. ಇದರ ನಡುವೆ ಸಿದ್ದರಾಮಯ್ಯನವರ ಪತ್ನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರಿಗೆ ಐಸಿಯುನಲ್ಲಿ ಡಾ ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ಮುಂದುವರೆಸಿದೆ.
ಇನ್ನು ತಾಯಿಯ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ರ ಯತೀಂದ್ರ, ಶ್ವಾಸಕೋಶದಲ್ಲಿ ನೀರು ತುಂಬಿದೆ. ಹಾಗಾಗಿ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಇದರಿಂದ ವೈದ್ಯರು ಸಾಕಷ್ಟು ಪರೀಕ್ಷೆ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ನಾಳೆವರೆಗೂ (ನವೆಂಬರ್ 18) ಆಸ್ಪತ್ರೆಯಲ್ಲೇ ಅಡ್ಮಿಟ್ ಇರಲು ವೈದ್ಯರು ತಿಳಿಸಿದ್ದಾರೆ. ಸಿಎಂ ಸಹ ಆಸ್ಪತ್ರೆಗೆ ಬರಲಿದ್ದಾರೆ. ನಾನು ಇಲ್ಲೇ ಇರುತ್ತೇನೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

