ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

Edited By:

Updated on: Feb 24, 2026 | 6:17 PM

ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಜೆಟ್​​ನಲ್ಲಿ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾಹಿತಿ ನೀಡಿದ್ದಾರೆ.

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಜೆಟ್​​ನಲ್ಲಿ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad )ಮಾಹಿತಿ ನೀಡಿದ್ದಾರೆ.

ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಸಂತೋಷ ಲಾಡ್ , ಇದೀಗ ಸಿಎಂ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ. ಬರವ ಬಜೆಟ್‌ನಲ್ಲಿ ಈ ಬಗ್ಗೆ ಹೇಳುತ್ತಾರೆ.ಬಿಜೆಪಿ ಅಧಿಕಾರದಲ್ಲಿದ್ದಾಗ ಎಷ್ಟು ಹುದ್ದೆ ಭರ್ತಿ ಮಾಡಿತ್ತು? ಅವರು ಒಂದೇ ಒಂದು ಹುದ್ದೆ ತುಂಬಿಲ್ಲ. ಆದರೆ ಅವರೇನು ಮಾಡಿದರು? ಬಿಜೆಪಿಯವರದ್ದು ಬರೀ ಇದೇ ನಾಟಕ. ಯುವಕರ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಈಗ ರಾಜ್ಯ ಸರಕಾರ ಹುದ್ದೆ ತುಂಬಿಕೊಳ್ಳುತ್ತೆ ಎನ್ನುವುದು ಗೊತ್ತಾಗಿದೆ. ಅದಕ್ಕಾಗಿ ಇದೀಗ ಹೋರಾಟ ಶುರು ಮಾಡಿದ್ದಾರೆ. ನಾಳೆ ಸಿಎಂ ಅನೌನ್ಸ್ ಮಾಡಿದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮಿಂದಲೇ ಇದು ಆಗಿದ್ದು ಎಂದು ಬರೆದುಕೊಳ್ಳುತ್ತಾರೆ. ಇದೇ ಕಾರಣಕ್ಕೆ ಹೋರಾಟ ಮಾಡುತ್ತಾರೆ. ಯುವಕರ ಬೇಡಿಕೆ ಸರಿಯಾಗಿಯೇ ಇದೆ.ನಾವು ಅವರೊಂದಿಗೆ ಇದ್ದೇವೆ. ಇದೀಗ ಅವರು ರಾಜ್ಯ ಸರಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅದೇ ರೀತಿ ಕೇಂದ್ರದ ವಿರುದ್ಧವೂ ಹೋರಾಟ ಮಾಡಲಿ. ನಾನು ಯುವಕರಲ್ಲಿ ಮನವಿ ಮಾಡಿಕೊಳ್ಳುವೆ. ನಿಮ್ಮ ಹೋರಾಟ ಶಾಂತಿಯುತವಾಗಿರಲಿ ಎಂದು ಮನವಿ ಮಾಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More