ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶ ಕೋರ್ಟ್ ಎತ್ತಿಹಿಡಿದರೂ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ: ಪರಮೇಶ್ವರ್
ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ರಾಜ್ಯಪಾಲರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆರೋಪಗಳನ್ನು ಮಾಡಿದ್ದರು, ಅದು ಕೇರಳ ಮತ್ತು ತಮಿಳುನಾಡುನಲ್ಲೂ ನಡೆಯಿತು. ಈ ರಾಜ್ಯಗಳ ಸಾಲಿಗೆ ಈಗ ಕರ್ನಾಟಕವೂ ಸೇರಿದಂತಿದೆ, ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಕಚೇರಿಯ ದುರ್ಬಳಕೆ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಪರಮೇಶ್ವರ್ ಹೇಳಿದರು.
ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ ಅವರು, ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ಕೇಂದ್ರ ಸಚಿವ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಲಿದ್ದಾರೆಯೇ ಅಂತ ಕೇಳಿದ ಪ್ರಶ್ನೆಗೆ ಮುಂದೇನೇನಾಗುತ್ತೋ ಗೊತ್ತಿಲ್ಲ, ಅವರ ವಿರುದ್ಧ ಚಾರ್ಜ್ಶೀಟ್ ತಯಾರಾಗಿದೆ, ಕಾನೂನು ಪ್ರಕ್ರಿಯೆ ನಡೆಯುತ್ತದೆ ಎಂದು ಹೇಳಿದರು. ರಾಜ್ಯಪಾಲರ ಕಚೇರಿ ದುರ್ಬಳಕೆಯಾಗುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದೆಯೇ ಅಂತ ಕೇಳಿದಾಗ ಸಚಿವ, 29ರಂದು ವಿಚಾರಣೆ ನಡೆಯಲಿದೆಯಲ್ಲ, ಅಲ್ಲಿನ ತೀರ್ಪನ್ನು ನೋಡಿಕೊಂಡು ಮುಂದಿನ ಕ್ರಮದ ಬಗ್ಗೆ ಯೋಚಿಸಲಾಗುವುದು ಎಂದರು.
ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಹೋಗುತ್ತಿರುವುದನ್ನು ಖಚಿತಪಡಿಸಿದ ಪರಮೇಶ್ವರ್, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೆ ನಡೆದಿರುವ ವಿದ್ಯಮಾನಗಳನ್ನು ಹೈಕಮಾಂಡ್ ಗೆ ಬ್ರೀಫ್ ಮಾಡಲು ಹೊಗುತ್ತಿದ್ದಾರೆ ಎಂದು ಹೇಳೀದರು. ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿಯವರ ವಿರುದ್ಧ ತನಿಖೆಯನ್ನು ಎತ್ತಿಹಿಡಿದರೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ಪಕ್ಷದ ವರಿಷ್ಠರು ಅದನ್ನು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಗಣೇಶೋತ್ಸವ ಹೆಸರಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು: ಸಾರ್ವಜನಿಕರಲ್ಲಿ ಜಿ ಪರಮೇಶ್ವರ್ ಮನವಿ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

