AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Siddaramaiah: ಗ್ಯಾರಂಟಿಗಳನ್ನು ಈಡೇರಿಸಲು ಹಣ ಹೇಗೆ ಹೊಂದಿಸುತ್ತೀರಿ ಅಂತ ಕೇಳಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೋಪ!

CM Siddaramaiah: ಗ್ಯಾರಂಟಿಗಳನ್ನು ಈಡೇರಿಸಲು ಹಣ ಹೇಗೆ ಹೊಂದಿಸುತ್ತೀರಿ ಅಂತ ಕೇಳಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೋಪ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 31, 2023 | 4:24 PM

Share

ಹಣಕಾಸಿನ ವಿಷಯ ಚರ್ಚೆಯಾಗುತ್ತಿದೆ, ವಿವರಗಳನ್ನೆಲ್ಲ ಬಹಿರಂಗಪಡಿಸಲಾದು, ಶುಕ್ರವಾರ ಸಭೆಯ ನಂತರ ಎಲ್ಲ ಗೊತ್ತಾಗುತ್ತದೆ ಎಂದು ಸಿಎಂ ಹೇಳಿದರು.

ಬೆಂಗಳೂರು: ಸಿಎಂ ಸಾಹಬ್ ಕೋ ಗುಸ್ಯಾ ಕ್ಯೋಂ ಆತಾ ಹೈ? ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಇಂದು ಮತ್ತೊಮ್ಮೆ ತಮ್ಮ ಸಿಡುಕುತನ (anger) ಪ್ರದರ್ಶಿಸಿದರು. 5 ಗ್ಯಾರಂಟಿಗಳನ್ನು ಈಡೇರಿಸಲು ಹಣಕಾಸು (finance) ಹೇಗೆ ಕ್ರೋಢೀಕರಿಸುತ್ತೀರಿ ಅಂತ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಏಕ್ ದಂ ಸಿಡುಕಿದ ಮುಖ್ಯಮಂತ್ರಿಗಳು ನೀನ್ ಕೊಡ್ತೀಯಾ ಹಣಾನಾ? ಅಂತ ಖಾರವಾಗಿ ಪ್ರಶ್ನಿಸುತ್ತಾರೆ. ಆದರೆ ಮುಖ್ಯಮಂತ್ರಿಗಳು ತಮ್ಮ ಮಾತು ಮುಂದುವರೆಸಿ 5 ಗ್ಯಾರಂಟಿಗಳನ್ನು ಈಡೇರಿಸುವುದಯ ಮಾತ್ರ ಗ್ಯಾರಂಟಿ ಅನ್ನುತ್ತಾರೆ. ಹಣಕಾಸಿನ ವಿಷಯ ಚರ್ಚೆಯಾಗುತ್ತಿದೆ, ವಿವರಗಳನ್ನೆಲ್ಲ ಬಹಿರಂಗಪಡಿಸಲಾದು, ಶುಕ್ರವಾರ ಸಭೆಯ ನಂತರ ಎಲ್ಲ ಗೊತ್ತಾಗುತ್ತದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.