ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಈಗಾಗಲೇ ಹೈಕಮಾಂಡ್ ಭೇಟಿಗೆ ಟೈಮ್ ಫಿಕ್ಸ್ ಆಗಿದ್ದು, ಹೀಗಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ನವದೆಹಲಿಗೆ ಹೋಗಿದ್ದಾರೆ. ಆದರೆ ಹೈಕಮಾಂಡ್ ಭೇಟಿಗೂ ಮುನ್ನ ಮಾತನಾಡಿರುವ ಸಿಎಂ, ಪಕ್ಷದೊಳಗೆ ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್ ವೀಕ್ಷಿಸಿ.
ದೆಹಲಿ, ಜುಲೈ 10: ಕರ್ನಾಟಕದಲ್ಲಿ ಕ್ರಾಂಗ್ರೆಸ್ ಪಾಳಯದಲ್ಲಿ ಪವರ್ ಶೇರಿಂಗ್ ಬಗ್ಗೆ ದಿನಕ್ಕೊಂದು ಹೇಳಿಕೆಗಳು ಹೊರಬೀಳುತ್ತಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಭೇಟಿ ಮುನ್ನ ಸುದ್ದಿಗೋಷ್ಠಿ ಮಾಡಿದ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಇಲ್ಲ. ನಾವು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್ ವೀಕ್ಷಿಸಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 10, 2025 12:53 PM
