ಮುಡಾ ಹಗರಣ: ಸಿಎಂ, ಪತ್ನಿಗೆ ಕ್ಲೀನ್ ಚಿಟ್; ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

|

Updated on: Jan 23, 2025 | 12:05 PM

CM Siddaramaiah's reaction of Lokayukta clean chit to him in MUDA case: ಮುಡಾ ಹಗರಣದ ತನಿಖೆ ನಡೆಸಿರುವ ಲೋಕಾಯುಕ್ತ ಸಂಸ್ಥೆ ವರದಿ ಸಿದ್ಧಪಡಿಸಿದ್ದು, ಹಗರಣದಲ್ಲಿ ಸಿಎಂ ಹಾಗು ಅವರ ಪತ್ನಿಯ ಪಾತ್ರ ಇಲ್ಲ ಎಂದು ಬರೆದಿದೆ ಎಂದು ಹೇಳಲಾಗುತ್ತಿದೆ. ಈ ವರದಿ ಬಗ್ಗೆ ಸಿಎಂ ಅವರ ಪ್ರತಿಕ್ರಿಯೆ ಕೇಳಲಾಗಿದ್ದು, ಅವರು ತನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ. ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರವಾದ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಯನ್ನು ಲೋಕಾಯುಕ್ತ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದೆ.

ಬೆಂಗಳೂರು, ಜನವರಿ 23: ಮುಡಾ ಹಗರಣದ ತನಿಖೆ ನಡೆಸಿರುವ ಲೋಕಾಯುಕ್ತ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎನ್ನುವ ಮಾಹಿತಿ ಮಾಧ್ಯಮಗಳಿಗೆ ಸಿಕ್ಕಿದೆ. ಈ ಬಗ್ಗೆ ಮಾಧ್ಯಮಗಳು ಸಿಎಂ ಅವರನ್ನು ಕೇಳಿದಾಗ, ತನಗೇನೂ ಗೊತ್ತಿಲ್ಲರೀ ಎಂದು ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದಾರೆ. ಮುಡಾ ಹಗರಣದಲ್ಲಿ, ಜಮೀನು ಡೀನೋಟಿಫೈ ಮಾಡುವಾಗ ಮತ್ತು ಭೂಪರಿವರ್ತನೆ ಮಾಡುವಾಗ ಮೈಸೂರಿನ ಮುಡಾ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಲೋಕಾಯುಕ್ತದ ತನಿಖಾ ವರದಿಯಲ್ಲಿ ಹೇಳಲಾಗಿದೆ. ಆದರೆ, ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ ಪಾತ್ರ ಎಲ್ಲೂ ಕಂಡು ಬಂದಿಲ್ಲ ಎಂದೂ ಸ್ಪಷ್ಟಪಡಿಸಲಾಗಿದೆ.

ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರವಾದ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಯನ್ನು ಲೋಕಾಯುಕ್ತ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದೆ. ಈ ವರದಿಯನ್ನು ಸೋಮವಾರ (ಜ. 27) ಕೋರ್ಟ್​ಗೆ ಸಲ್ಲಿಕೆ ಮಾಡಲಾಗುತ್ತದೆ.

ಇದನ್ನೂ ನೋಡಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ