AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ಜೋಸೆಫ್​​ ವಿಜಯ್​​

ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ಜೋಸೆಫ್​​ ವಿಜಯ್​​

ಪ್ರಸನ್ನ ಹೆಗಡೆ
|

Updated on: May 10, 2026 | 2:34 PM

Share

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ತಮ್ಮ ಮೊದಲ ಭಾಷಣದಲ್ಲಿಯೇ ಹಿಂದಿನ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, 10 ಲಕ್ಷ ಕೋಟಿ ಸಾಲ ಮತ್ತು ಬರಿದಾದ ಖಜಾನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜೊತೆಗೆ ಯಾವುದೇ ಮುಚ್ಚುಮರೆಯಿಲ್ಲದೆ, ಸಾರ್ವಜನಿಕವಾಗಿ ಆಡಳಿತ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಚೆನ್ನೈ, ಮೇ 10: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್​​ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ತಮ್ಮ ಮೊದಲ ಭಾಷಣದಲ್ಲೇ ಅಬ್ಬರಿಸಿದ ‘ಜನನಾಯಗನ್’ ಹಿಂದಿನ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ತಮಿಳುನಾಡಿನ ಪ್ರಸ್ತುತ ಆರ್ಥಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಜಯ್​​, ರಾಜ್ಯವು 10 ಲಕ್ಷ ಕೋಟಿಗೂ ಹೆಚ್ಚು ಸಾಲದಲ್ಲಿದ್ದು, ಖಜಾನೆ ಸಂಪೂರ್ಣ ಬರಿದಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪಾರದರ್ಶಕ ಆಡಳಿತವನ್ನು ನೀಡುವ ಗುರಿ ಹೊಂದಿದ್ದು, ಯಾವುದೇ ಮುಚ್ಚುಮರೆಯಿಲ್ಲದೆ, ಸಾರ್ವಜನಿಕವಾಗಿ ಆಡಳಿತ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us